ಗದಗ | ಕೆಸರು ಗದ್ದೆಯಂತಾದ ರಸ್ತೆ; ದುರಸ್ತಿಗೊಳಿಸುವಂತೆ ರೈತರ ಆಗ್ರಹ

Date:

ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಗಳು ಕಸರುಗದ್ದೆಯಂತಾಗಿ ಮಾರ್ಪಟ್ಟು, ರೈತರು ತಮ್ಮ ಜಮೀನುಗುಗಳಿಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಗ್ರಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಿಂದ ಹೆಸರೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳೇ ತುಂಬಿವೆ.

ಸ್ಥಳೀಯ ರೈತರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ದೊಡ್ಡೂರ ಗ್ರಾಮದ ರೈತರ ನೂರಾರು ಎಕರೆ ಜಮೀನುಗಳಿಗೆ ಹೋಗಲು ಇದೇ ರಸ್ತೆಯನ್ನು ಬಳಕೆ ಮಾಡುತ್ತಾರೆ. ಮಳೆಯಿಂದ ಇಡೀ ರಸ್ತೆ ಕೆಸರು ಗದ್ದೆಯಂತಾಗಿದೆ. ನೀರು ತುಂಬಿದೆ. ಎತ್ತು, ಚಕ್ಕಡಿಗಳು ಕೆಸರಿನಲ್ಲಿ ಸಿಕ್ಕಿಕೊಂಡು ರೈತರು ಜಮೀನಿನ ಬಳಿ ಹೋಗಲು ಆಗುತ್ತಿಲ್ಲ. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಿ ಕೆಲಸ ಮಾಡದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಳ್ಳಟ್ಟಿ, ದೊಡ್ಡೂರ ಹಾಗೂ ಯಲ್ಲಾಪೂರ ಗ್ರಾಮಗಳಲ್ಲಿ ನಡೆದ ʼಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆʼ ಕಾರ್ಯಕ್ರಮದಲ್ಲಿ ನಾವು ಮನವಿ ಮಾಡಿದ್ದರೂ, ಸಮಸ್ಯೆ ಬಗೆಹರಿಸಿಲ್ಲ” ಎಂದು ರೈತರು ಅಸಮಾಧಾನ ವ್ಯಕ್ತಪಡಿದರು.

ದೊಡ್ಡೂರ ಗ್ರಾಮದ ರೈತ ಅಮರಪ್ಪ ಗುಡಗುಂಟಿ ಮಾತನಾಡಿ, “ಈ ದುಸ್ಥಿತಿ ಸರಿ ಸುಮಾರು ಎರಡು-ಎರಡುವರೆ ವರ್ಷಗಳಿಂದ ಹೀಗೆಯೇ ಇದೆ. ಈ ಕಷ್ಟ ಎಂದು ಮುಗಿಯುವುದೋ ತಿಳಿಯದಾಗಿದೆ. ಈವರೆಗೂ ಈ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಅಧ್ಯಕ್ಷರಾಗಲಿ, ಸದಸ್ಯರುಗಳಾಗಲಿ ಇತ್ತ ತಲೆ ಹಾಕಿಯೂ ಮಲಗಿಲ್ಲಾ ಅನ್ನೋದು ವೈಯಕ್ತಿಕವಾಗಿ ಬೇಸರ ಉಂಟಾಗಿದೆ” ಎಂದು ನೋವು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

“ರಸ್ತೆ ಸಮಸ್ಯೆ ಬಗೆಹರಿಸದೆ ಹೋದಲ್ಲಿ ಸೆಪ್ಟೆಂಬರ್ 4ರಂದು ಕಾನೂನು ರೀತಿಯ ಹೋರಾಟ ಆರಂಭಿಸಿ, ಪಂಚಾಯಿತಿಗೆ ಭೀಗ ಜಡಿದು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...