ಗದಗ | ನಿಗೂಢ ಕಾಯಿಲೆ: ಅರ್ಧ ಗಂಟೆಯಲ್ಲೇ 20ಕ್ಕೂ ಹೆಚ್ಚು ಕುರಿಗಳು ಸಾವು

Date:

ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್‌ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ.

ಮುಂಡರಗಿ ತಾಲೂಕಿನ ಕೆರಳ್ಳಿ ತಾಂಡಾದಲ್ಲಿ ಕುರುಗಳು ಸಾವನ್ನಪ್ಪಿವೆ. ಕುರುಗಳು ನಿಂತಲೇ ಕುಸಿದು ಬೀಳುತ್ತಿದ್ದು, ಒದ್ದಾಡಿ ಸಾಯುತ್ತಿವೆ ಎಂದು ಹೇಳಲಾಗಿದೆ. ಕೆರಳ್ಳಿ ತಾಂಡಾದ ಪೋಮಪ್ಪ ಲಮಾಣಿ ಎಂಬುವವರು ಸಾಕಿದ್ದ ಕುರಿಗಳು ಸರಣಿಯಾಗಿ ಸಾವನ್ನಪ್ಪುತ್ತಿವೆ.

ಪೋಮಪ್ಪ ಅವರು 60 ಕುರಿಗಳನ್ನು ಸಾಕಿದ್ದರು. ಅವುಗಳಲ್ಲಿ 20 ಕುರಿತುಗಳು ಮೃತಪಟ್ಟಿವೆ. ವಿಷಯ ತಿಳಿದು ಸ್ಥಳಕ್ಕೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಮೃತ ಕುರಿಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಕುರಿಗಳಿಗೆ ಅಂಥ್ರಾಕ್ಸ್ ಸೋಂಕು ತಗುಲಿರಬಹುದು ಎಂದು ಶಂಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಥ್ರಾಕ್ಸ್ ಸೋಂಕು – ಬ್ಯಾಸಿಲಸ್ ಅಂಥಾಸಿಸ್ ಎಂಬ ಬ್ಯಾಕ್ಟಿರಿಯಾದಿಂದ ಹರಡುತ್ತದೆ. ಗಾಳಿ ಮೂಲಕ ಈ ಸೋಂಕು ಪರಸರಿಸುತ್ತದೆ. ಕುರಿಗಳು, ಹಸುಗಳು ಹಾಗೂ ಕುದುರೆಗಳಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎಂಧು ವೈದ್ಯರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...