ಗದಗ | ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್: ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ

Date:

ಗದಗ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರನ್ಸ್ ಹಾಲ್‌ನಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜಿ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜಿಯಾದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚ್‌ಗಳನ್ನು ರಚಿಸಿದ್ದು, ಗದಗ ಜಿಲ್ಲೆಯಲ್ಲಿ ಒಟ್ಟು 19896 ವಿವಿಧ ಚಾಲ್ತಿ ಪ್ರಕರಣಗಳಿದೆ. ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2821 ಪ್ರಕರಣಗಳನ್ನು ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜಿಗಾಗಿ ಗುರುತಿಸಲಾಗಿರುತ್ತದೆ ಎಂದು ಬಸವರಾಜ ತಿಳಿಸಿದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಂಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ 14ರಂದು ಜರುಗುವ ರಾಷ್ಟೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಐವರು ಆರೋಪಿಗಳ ಬಂಧನ

ಕಳೆದ ಸೆಪ್ಟೆಂಬರ್-2024 ರಂದು ಜರುಗಿದ ಲೋಕ ಅದಾಲತ್‌ನಲ್ಲಿ 1770 ಚಾಲ್ತಿ ಪ್ರಕರಣಗಳನ್ನು ಹಾಗೂ 19898 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 21668 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 08 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ, ವಾರ್ತಾಧಿಕಾರಿ ವಸಂತ ಮಡ್ಲೂರ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...