ಗದಗ | ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಸಿ. ಎನ್ ಶ್ರೀಧರ್

Date:

“ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ಒದಗಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಫಾಯಿ ಕರ್ಮಚಾರಿ, ಮ್ಯಾನುವಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಸೌಲಭ್ಯಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಕುರಿತು ಕ್ರಮ ಜರುಗಿಸಬೇಕು. ನೇರವಾಗಿ ಪಾವತಿಸಲಾಗುತ್ತಿರುವ ಪೌರಕಾರ್ಮಿಕರ ವೇತನದಲ್ಲಿ ಭವಿಷ್ಯ ನಿಧಿ ಹಾಗೂ ಇಎಸ್‌ಐ ಕಡಿತಗಳ ಕುರಿತು ಪರಿಶೀಲಿಸಬೇಕು. ಪೌರಕಾರ್ಮಿಕರು ಹಾಗೂ ಅವಲಂಬಿತರಿಗೆ ದೊರಕಬೇಕಾದ ಸೌಲಭ್ಯಗಳು ಹಾಗೂ ಕುಂದುಕೊರತೆ ಕುರಿತು ತಾಲೂಕು ಮಟ್ಟದಲ್ಲಿಯೂ ಸಭೆ ಜರುಗಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಪೌರಕಾರ್ಮಿಕರಿಗೆ ಪರಿಕರಗಳ ಬಳಕೆಗಳ ಕುರಿತು ಕಾರ್ಯಾಗಾರ, ಪೌರಕಾರ್ಮಿಕರ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ನಗರಸಭೆಯ ವ್ಯಾಪ್ತಿಯಲ್ಲಿನ ಶೌಚಾಲಯಗಳ ದುರಸ್ತಿ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಜಿಲ್ಲಾ ಸಂಯೋಜಕರಾದ ರಮೇಶ ಕೊಳೂರ, ಸಮಿತಿ ಸದಸ್ಯರಾದ ಯುವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...