ಗದಗ | ಮಾನವೀಯ ಮೌಲ್ಯ ಬೆಳೆಸಿಕೊಳ್ಳುವುದು ಅವಶ್ಯ: ಉಪನ್ಯಾಸಕ ಸೋಮಲಿಂಗ ಕರ್ಣಿ

Date:

ಪ್ರಸ್ತುತ ತಾಂತ್ರಿಕ ಯುಗದಲ್ಲಿ ಮಾನವೀಯತೆ ಕಳೆದುಕೊಳ್ಳುತ್ತಿದೆ. ಮೊದಲೆಲ್ಲಾ ಗ್ರಾಮೀಣ ಭಾಗದಲ್ಲಿ ಹಿರಿಯರ ಮಾರ್ಗದರ್ಶನ ಪಡೆಯುತ್ತಿದ್ದರು. ಆದರೆ ಗ್ರಾಮೀಣ ಹಾಗೂ ನಗರಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಾಕಿ ಸಲಹಿದ ತಂದೆ ತಾಯಂದಿರನ್ನು ಮನೆಯಿಂದ ಹೋರ ಹಾಕುತ್ತಿರುವುದು ಶೋಚನೀಯ ಸಂಗತಿ ಎಂದು ಉಪನ್ಯಾಸಕ ಸೋಮಲಿಂಗ ಕರ್ಣಿ ಹೇಳಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದ ಪುರಸಭೆಯಲ್ಲಿ ಹಮ್ಮಿಕೊಂಡಿದ್ದ ಸ್ನೇಹ ಸಂಜೀವಿನಿ ವಿವಿಧ್ದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಮತ್ತು ವೈಭವ ನಿರ್ಗತಿಕರ ವೃದ್ಧಾಶ್ರಮದ ವಾರ್ಷಿಕೋತ್ಸವ ಸಮಾರಂಭ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದರು.

“ಹಿರಿಯರು ಮಾನವೀಯ ಮೌಲ್ಯಗಳನ್ನು ತಿಳಿಸುವ ಕತೆಗಳನ್ನು ಹೇಳುವ ಮೂಲಕ ಸಂಸ್ಕಾರ ಕಲಿಸಿಕೊಡುತ್ತಿದ್ದರು. ಆದರೆ ಆ ಸಂಸ್ಕಾರ ಅಳವಡಿಸಿಕೊಳ್ಳದ ಮನುಷ್ಯರು ಹಿರಿಯರನ್ನು ನೋಡಿಕೊಳ್ಳದೆ ಇರುವುದರಿಂದ ಇಂದು ವೃದ್ಧಾಶ್ರಮಗಳು ಆರಂಭವಾಗುತ್ತಿವೆ. ಮನುಷ್ಯರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ಸಾಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಲಯನ್ಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗೋವಿಂದರಾಜ್ ಗುಡಿಸಾಗರ ಮಾತನಾಡಿ, “ತಮ್ಮ ಮಕ್ಕಳಿಂದ ದೂರವಾದ ಹಿರಿಯರ ಆರೈಕೆ, ಆರೋಗ್ಯ, ಯೋಗಕ್ಷೇಮ ನೋಡಿಕೊಳ್ಳುತ್ತಿರುವ ಈ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ. ಯುವಕರು ಸೇರಿ ಇಂತಹ ಸಂಸ್ಥೆ ನಿರ್ಮಾಣ ಮಾಡಿ, ಹಿರಿಯರ ಸೇವೆ ಮಾಡುತ್ತಿರುವುದು ಮಹತ್ಕಾರ್ಯ” ಎಂದರು.

ಕಾರ್ಯಕ್ರಮದಲ್ಲಿ ಸಚಿನ್ ತಳವಾರ, ಸ್ನೇಹ ಸಂಜೀವಿನಿ ಸಂಸ್ಥೆ ಅಧ್ಯಕ್ಷ ಶಶಿಕುಮಾರ ಬೋಯಿಟೆ, ಬಸವರಾಜ್ ಹವಳದ ಹಾಗೂ ವಿಧ್ಯಾರ್ಥಿಗಳು ಸೇರಿದಂತೆ ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...