ಗದಗ | ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ : ಯು ಬಸವರಾಜ್

Date:

“ಜಮೀನು ಗ್ರಾಮೀಣ ಜನರ ಉತ್ಪಾದನೆಯ ಏಕೈಕ ಮಾರ್ಗವಾಗಿದೆ. ಗಜೇಂದ್ರಗಡ ತಾಲ್ಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಕೆ ಮಾಡಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು ಬಸವರಾಜ ಬೇಸರ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಶಿಲ್ದಾರ್ ಕಚೇರಿ ಮುಭಾಂಗದಲ್ಲಿ  ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡುವಂತೆ ಪ್ರತಿಭಟಿಸಿ ತಹಸೀಲ್ದಾರ್ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ ಮಾತನಾಡಿ “ಬಗರ್ ಹುಕಂ ಸಾಗುವಳಿದಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅನೇಕ ಬಾರಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಎಸಿ ಸೇರಿ ವಿವಿಧ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಯಾರೂ ಗಮನ ಹರಿಸಿಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಯಾವುದೇ ರೈತರನ್ನು ಒಕ್ಕಲೆಬ್ಬಿಸದೇ ಕಾಯ್ದೆಯಡಿ ಪರಿಶೀಲಿಸಿ ಹಕ್ಕುಪತ್ರ, ಸಾಗುವಳಿ ಚೀಟಿ ನೀಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಲಕ್ಷಾಂತರ ಮಂದಿ ಸಾಗುವಳಿದಾರರು 3 ತಲೆ ಮಾರುಗಳಿಂದ ಭೂಮಿಯನ್ನು ಸಾಗುವಳಿ ಮಾಡುತ್ತಾ  ಬಂದಿದ್ದಾರೆ. ಅಲ್ಲದೆ ಅದನ್ನು ಸಕ್ರಮಗೊಳಿಸಲು ನಮೂನೆ 50,53,57 ರಲ್ಲಿ ಅರ್ಜಿ ಹಾಕಿದ ಸಾಗುವಳಿದಾರರಿಗೆ ಅರ್ಜಿ ಪರಿಶೀಲಿಸಿ    ಸಾಗುವಳಿ ಚೀಟಿ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ” ಬಾಲು ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಎಂ ಎಸ್ ಹಡಪದ ಮಾತನಾಡಿ “ತಾಲ್ಲೂಕಿನ ಜನರು ಬಗರ್ ಹುಕುಂ ಸಾಗುವಳಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿ ಅನೇಕ ವರ್ಷಗಳು ಕಳೆದಿದೆ. ಭೂಮಿ ಮಂಜೂರು ಮಾಡುವಂತೆ ಸರ್ಕಾರಿ ಆದೇಶ ಇದ್ದರೂ, ಭೂಮಿ ಮಂಜೂರು ಮಾಡುತ್ತಿಲ್ಲ. ತಾಲ್ಲೂಕಿನಲ್ಲಿ ಸಾವಿರಾರು ಅರ್ಜಿಗಳು ಇತ್ಯರ್ಥವಾಗಿಲ್ಲ. ಪುನಃ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕೊಡಬೇಕು. ಶಾಸಕರ ಅಧ್ಯಕ್ಷತೆಯಲ್ಲಿ ಇರುವ ಭೂ ಮಂಜೂರಾತಿ ಸಮಿತಿಯನ್ನು ತಕ್ಷಣವೇ ಕರೆದು  ಸಮಸ್ಯೆ ಇತ್ಯರ್ಥಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ರಾಜು ಕಪನೂರ್ ಸೇರಿ ಐವರಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ಪ್ರತಿಭಟನೆಯಲ್ಲಿ ಪೀರು ರಾಠೋಡ, ಚೆನ್ನಪ್ಪ ಗುಗಲೋತ್ತರ, ದಾವಲಸಾಬ ತಾಳಿಕೋಟಿ, ಚಂದ್ರು ರಾಠೋಡ, ಮೆಹಬೂಬ್ ಹವಾಲ್ದಾರ್, ಗಣೇಶ ಮಾಳೋತ್ತರ, ರೂಪ್ಲೇಶ ಮಾಳೋತ್ತರ, ವಿರೇಶ ರಾಠೋಡ, ಕುಮಾರ ರಾಠೋಡ, ಶಾಮಿದಸಾಬ ದಿಂಡವಾಡ, ದೀಪಲೇಪ್ಪ ರಾಠೋಡ, ದಿಂಡುರು ಚವಳವ್ವ ರಾಠೋಡ ಗುಬಾವ್ವ ರಾಠೋಡ ರೇಣವ್ವ  ಗುಗಳೋತ್ತರ ಕೃಷ್ಣಪ್ಪ ಮಾಳೋತ್ತರ ಶಿವಪ್ಪ ಮಾಳೋತ್ತರ ಹರೇಶ, ಸೇರಿದಂತೆ ಗಜೇಂದ್ರಗಡ, ಬೈರಾಪೂರ, ಕಾಲಕಾಲೇಶ್ವರ, ಗೌಡಗೇರಿ,ರೈತರು ಕೃಷಿಕೂಲಿಕಾರರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...