ಗದಗ | ಸೋಲು-ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ: ಡಿಸಿ ಶ್ರೀಧರ್

Date:

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ತಿಳಿಸಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, “ತಾಲೂಕು ಮಟ್ಟದಿಂದ ಆಯ್ಕೆಯಾಗಿ ಜಿಲ್ಲಾ ಮಟ್ಟದಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳು ಬಂದಿದ್ದು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಪಾಲ್ಗೊಂಡು ಗದಗ ಜಿಲ್ಲೆಗೆ ಕೀರ್ತಿ ತರಬೇಕು” ಎಂದು ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಮಾತನಾಡಿ, “ಗದಗ ಜಿಲ್ಲೆಯ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಹಾಕಿ ಕ್ರೀಡೆಯಲ್ಲಿ ರಾಜು ಬಗಾಡೆ, ಕುಸ್ತಿಯಲ್ಲಿ ಪ್ರೇಮಾ ಹುಚ್ಚಣ್ಣವರ, ಸೈಕ್ಲಿಂಗ್‌ದಲ್ಲಿ ಕು. ಮಲ್ಲಿಗವಾಡ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಸ್ವತಃ ನನ್ನ ಸಹೋದರಿ ದಾಕ್ಷಾಯಣಿ ಅಸೂಟಿ ಅವರೂ ಕೂಡ ಈ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ 1500 ಮೀ, 3000 ಮೀ ಓಟದಲ್ಲಿ ಪ್ರಶಸ್ತಿ ತಂದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳೂ ಸಹ ರಾಜ್ಯ ಮಟ್ಟದಲ್ಲಿಯೂ ಗದಗ ಜಿಲ್ಲೆಯ ಹೆಸರು ತರಬೇಕು” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಮಾತನಾಡಿ, “ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು ಸೆಪ್ಟೆಂಬರ್ 3 ಹಾಗೂ 4 ರಂದು ಎರಡು ದಿನಗಳ ಕಾಲ ಜರುಗುತ್ತಿವೆ. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿಯೂ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕು” ಎಂದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ, ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಜಿ, ವಾಸು ಕಲಕಂಬಿ,ರಂಜಿತ ಚವ್ಹಾಣ, ದೈಹಿಕ ಶಿಕ್ಷಕರು, ಕ್ರೀಡಾಪಟುಗಳು, ಕೆಕೆಪಿಪಿಜಿ ಸಂಗೀತ ಪಾಠಶಾಲೆ ವಿದ್ಯಾರ್ಥಿಗಳು, ಎಂ ಎ ಯರಗುಡಿ, ಶಿರಹಟ್ಟಿ ಸಹಾಯಕ ಯುವಜನ ಕ್ರೀಡಾಧಿಕಾರಿ ಎಂ ಡಿ ತಳ್ಳಳ್ಳಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...