ಗದಗ | ಭಾರತ ಕಮ್ಯೂನಿಸ್ಟ್ ಪಕ್ಷದ 24ನೇ ಮಹಾ ಅಧಿವೇಶನದ ರಾಜಕೀಯ ಕರುಡು ವರದಿ ಬಿಡುಗಡೆ

Date:

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) CPIM ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ರಾಜಕೀಯ ವ್ಯವಸ್ಥೆಯ ಪ್ರಜಾಪ್ರಭುತ್ವ ಮಾತ್ರವಲ್ಲದೆ, ಪಕ್ಷದ ಆಂತರಿಕ ವಿಚಾರಗಳಲ್ಲೂ ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದೆ. ಎಂದು  24ನೇ   ಮಹಾ ಅಧಿವೇಶನದ ರಾಜಕೀಯ ಕರುಡು ವರದಿ ಬಿಡುಗಡೆಗೊಳಿಸಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಚಂದ್ರಪ್ಪ ಹೊಸ್ಕೊರ ತಿಳಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ ಕಲ್ಯಾಣ ಮಂಟಪದಲ್ಲಿ ನಡೆದ, ಇದೇ ಎಪ್ರೀಲ್ 2 ರಿಂದ 6 ರವರೆಗೆ ಮದುರೈ ನಲ್ಲಿ ನಡೆಯಲಿರುವ  ಸಿಪಿಐಎಂ ಪಕ್ಷದ 24 ನೇ ಮಹಾ ಅಧಿವೇಶನದ ರಾಜಕೀಯ ಕರುಡು ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“ಪ್ರತಿ 3 ವರ್ಷಗಳಿಗೊಮ್ಮೆ ಪಕ್ಷದ ಎಲ್ಲಾ ಹಂತದ ಸಮ್ಮೇಳನಗಳು ಶಾಖೆಯ ಹಂತದಿಂದ ಅಖಿಲ ಭಾರತದ ಹಂತದವರೆಗೆ ನಡೆಯುತ್ತವೆ. ಪಕ್ಷದ ಮಹಾಧಿವೇಶನ ನಡೆಯುವ ಎರಡು ತಿಂಗಳ ಮುಂಚೆ ಪಕ್ಷದ ಕೇಂದ್ರ ಸಮಿತಿಯು ರಾಜಕೀಯ ನಿರ್ಣಯದ ಕರಡೊಂದನ್ನು ಲಿಖಿತವಾಗಿ ಬಿಡುಗಡೆ ಮಾಡುತ್ತದೆ. ಈ ಕರಡಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಆಗಿರುವ ರಾಜಕೀಯ, ಸಾಮಾಜಿಕ, ಆರ್ಥಿಕ ಬೆಳವಣಿಗೆಗಳ ವಿಶ್ಲೇಷಣೆ ಮತ್ತು ಮುಂದಿನ 3 ವರ್ಷಗಳಿಗೆ ನಾವು ಕೈಗೊಳ್ಳಬಹುದಾದ ನಿಲುವುಗಳ ಕುರಿತು ವಿವರವಾಗಿ ಚರ್ಚಿಸಲಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ್ ಮಾತನಾಡಿ, “ಈ ಕರಡನ್ನು ದೇಶದಲ್ಲಿರುವ ಸಿಪಿಐಎಂ ನ ಎಲ್ಲಾ ಸದಸ್ಯರು ತಮ್ಮ ಶಾಖೆ ಮತ್ತು ಸಮಿತಿಗಳಲ್ಲಿ ಓದಿ, ಚರ್ಚಿಸಿ ಅದರ ಕುರಿತು ತಮ್ಮ ಸ್ಥಳೀಯ ಅನುಭವದ ಆಧಾರದ ಮೇಲೆ ಸಲಹೆ, ತಿದ್ದುಪಡಿಗಳನ್ನು ಸೂಚಿಸುತ್ತಾರೆ. ಇದು ಕೇವಲ ಪಕ್ಷದ ಸದಸ್ಯರುಗಳಿಗೆ ಮಾತ್ರವಲ್ಲದೆ. ಇದೇ ಕರಡನ್ನು ಬಹಿರಂಗವಾಗಿಯೂ ಬಿಡುಗಡೆ ಮಾಡಿ ಸಾರ್ವಜನಿಕರೂ ಇದನ್ನು ಓದಿ ತಮ್ಮ ಅಭಿಪ್ರಾಯಗಳನ್ನು ನೀಡಲು ಅವಕಾಶಗಳನ್ನು ಕಲ್ಪಿಸಲಾಗಿದೆ” ಎಂದರು.

“ಈ ಎಲ್ಲಾ ತಿದ್ದುಪಡಿಗಳ ಕುರಿತು ಪಕ್ಷದ ಮಹಾಧಿವೇಶನಕ್ಕೆ ಆಯ್ಕೆಯಾದ ಪ್ರತಿನಿಧಿಗಳು ಚರ್ಚಿಸಿ ಕರಡನ್ನು ಅಂತಿಮಗೊಳಿಸುತ್ತಾರೆ. ಇದರ ಆಧಾರದಲ್ಲೇ ಸಿಪಿಐಎಂ ಮುಂದಿನ 3 ವರ್ಷಗಳು ಕೆಲಸ ಮಾಡುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು, ಉದ್ಯೋಗ ಸೃಷ್ಟಿಗೆ ಶೀಘ್ರ 3000 ಪವರ್ ಮ್ಯಾನ್ ನೇಮಕ.

ಈ ವೇಳೆ ಪಕ್ಷದ ಹಿರಿಯ ಮುಖಂಡ  ಜಿ.ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ, ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಚೆನ್ನಪ್ಪ ಗುಗಲೋತ್ತರ, ಚಂದ್ರು ರಾಠೋಡ, ಗಣೇಶ ರಾಠೋಡ, ರೇಣಪ್ಪ ಕಲ್ಗುಡಿ, ಕರಿಯಮ್ಮ ಗುರಿಕಾರ, ನಜೀರ ಮಾಲ್ದಾರ, ಶಿವಾಜಿ ಗಡ್ಡದ, ಸೇರಿದಂತೆ ಪಕ್ಷದ ಸದಸ್ಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...