ಗದಗ | ಕೆ ಎಚ್‌ ಪಾಟೀಲ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

Date:

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್‌ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಸುಜಾತಾ ಜೋಗಣ್ಣವರ (22) ಮೃತಪಟ್ಟ ಬಾಣಂತಿ.

ಹೆರಿಗೆಗಾಗಿ ನರಗುಂದದಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಸುಜಾತಾ ಅವರನ್ನು ಕರೆತರಲಾಗಿತ್ತು. ಭಾನುವಾರ ಬೆಳಿಗ್ಗೆ ಹೆರಿಗೆಯಾದ ಒಂದು ತಾಸಿನಲ್ಲಿ ಬಾಣಂತಿ ತಲೆ ಸುತ್ತಿ ಬಿದ್ದಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಸಂಬಂಧಿ ದತ್ತು ಜೋಗಣ್ಣವರ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಇದ್ದರೂ ರೋಗಿಗಳ ಕಡೆಯವರೇ ರಕ್ತ ಹೊಂದಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿ ಕಾಡಿಸುತ್ತಾರೆ. ಕಷ್ಟಪಟ್ಟು ರಕ್ತ ಹೊಂದಿಸಿಕೊಟ್ಟರೂ ಬಾಣಂತಿಯನ್ನು ಉಳಿಸಿಕೊಡಲಿಲ್ಲ ಎಂದು ದೂರಿದರು.

ಇದನ್ನೂ ಓದಿ: ಗದಗ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ದೇಹದ ರಕ್ತನಾಳದಲ್ಲಿ ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ (ಡಿಐಸಿ) ಬಾಣಂತಿ ಮೃತಪಟ್ಟಿದ್ದಾರೆ. ಗರ್ಭಿಣಿ ಇದ್ದಾಗ ಸರಿಯಾಗಿ ತೋರಿಸಿಕೊಂಡಿಲ್ಲ. ಹೆರಿಗೆಯಲ್ಲಿ ಹೈರಿಸ್ಕ್ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಈ ರೀತಿಯ ಸಮಸ್ಯೆ ಕಾರಣಕ್ಕೆ ಹೆರಿಗೆ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟರು. ಮಗು ಆರೋಗ್ಯದಿಂದ ಇದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಮೃತ ಸುಜಾತರ ಕುಟುಂಬಸ್ಥರು ವೈದ್ಯರ ಮೇಲೆಯೂ, ವೈದ್ಯರು ಬಾಣಂತಿಯ ಆರೋಗ್ಯ ಸ್ಥಿತಿಯ ಬಗ್ಗೆಯೂ ಆರೋಪ ಮಾಡಿದ್ದಾರೆ. ಆದರೆ, ಬಾಣಂತಿ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...