ಗದಗ | ಮೀಟರ್ ಬಡ್ಡಿ ದಂಧೆ ನಡೆಸುವ ಹಾಗೂ ಮೈಕ್ರೋ ಫೈನಾನ್ಸ್ ಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು: ಚಂದ್ರು ಪೂಜಾರ್ ಆಗ್ರಹ

Date:

“ಮೈಕ್ರೋ ಫೈನಾನ್ಸಿಗಳ ಹಾವಳಿಯಿಂದ ಗ್ರಾಹಕರು  ಊರು ಬಿಡುವುದು ಆತ್ಮಹತ್ಯೆಗಳು ಮಾಡಿಕೊಳ್ಳುವ ಪ್ರಯತ್ನಗಳನ್ನು ನಡೆಯುತ್ತಿವೆ. ಆದ್ದರಿಂದ ಮುಂಡರಗಿ ತಾಲೂಕಿನಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ದಿನದ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ಮೂಲಕ ಮೀಟರ್ ಬಡ್ಡಿ ದಂದೆ  ನಡೆಸುತ್ತಿದ್ದಾರೆ.   ಜೊತೆಗೆ ಮೈಕ್ರೋ ಫೈನಾನ್ಸ್ ಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ನಮ್ಮ ಕರವೇ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಒತ್ತಾಯಿಸಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಮೀಟರ್ ಬಡ್ಡಿ ದಂದೆ ನಡೆಸುತ್ತಿರುವವರ ಮೇಲೆ ಹಾಗೂ ಮೈಕ್ರೋ ಫೈನಾನ್ಸ್ ಗಳ ಮೇಲೆ  ಕಾನೂನು ಕ್ರಮಕ್ಕೆ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಮುಂಡರಗಿ ಪಟ್ಟಣದಲ್ಲಿ ಅನೇಕ ರೈತಾಪಿ ವರ್ಗದವರು, ಕೂಲಿಕಾರ್ಮಿಕರು ಹಾಗೂ ಬಡ ಕುಟುಂಬ ವ್ಯಾಪಾರಸ್ಥರು ಇದ್ದಾರೆ. ಇವರ ಆರ್ಥಿಕ ಪರಿಸ್ಥಿತಿಯನ್ನು ಅರಿತು, ಬಂಡವಾಳ ಶಾಹಿ ಮನಸ್ಥಿತಿಯವರು ಮೀಟರ್ ಬಡ್ಡಿ ದಂಧೆ ನಡೆಸಿ ಬಡ್ಡಿ ಸಾಲದ ರೂಪದಲ್ಲಿ ನೀಡುತ್ತಾರೆ. ದಿನದ ಬಡ್ಡಿ ವಾರದ ಬಡ್ಡಿ ತಿಂಗಳ ಬಡ್ಡಿ ಅಂತ ಹೀಗೆ ಅನೇಕ ರೀತಿಯಲ್ಲಿ ಬಡವರ ರಕ್ತವನ್ನು ಹಿರುತ್ತಾರೆ. ಸಾಲ ಪಡೆದಂತ ವ್ಯಕ್ತಿಗಳು ಮೀಟರ್ ಬಡ್ಡಿ ಸಾಲವನ್ನು ತೀರಿಸಲಾಗದೆ, ಅನೇಕ ದುಶ್ಚಟಗಳಿಗೆ  ಬಲಿಯಾಗಿ ತಮ್ಮ ಕುಟುಂಬ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೂಡಲೇ ಮೀಟರ್ ಬಡ್ಡಿ ಹಾಗೂ ಪೈನಾನ್ಸ್ ಕಂಪನಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಚಂದ್ರು ಪೂಜಾರ್ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸೌಹಾರ್ದತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ : ಬಾ.ಹ.ರಮಾಕುಮಾರಿ

ಮನವಿ ಸಂದರ್ಭದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ರಾಜಭಕ್ಷಿ ಕೆಂಪ್ಪಸಾಬಣ್ಣವರ್, ಇರ್ಫಾನ್ ಬೇಪಾರಿ, ನಜಿರ್ ಸಾಬ್ ಹೊನ್ನಳ್ಳಿ, ಸುರೇಶ್ ಸವದತ್ತಿ, ಮಲ್ಲೇಶ್ ದೊಡ್ಡಮನಿ, ದಾವೂದ್ ಮಕಂದರ್ ಹಾಗೂ ಅನೇಕ ಹೋರಾಟಗಾರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...