ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು

Date:

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಮುಂಗಾರು ವಾಣಿಜ್ಯ ಬೆಳೆಯಾದ ಹೆಸರು ಕಾಳು ಬೆಳೆದ ರೈತರ ಪಾಡು ಹೇಳತೀರದಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೇ ಇಳುವರಿ ಕುಂಠಿತವಾಗಿರುವ ಹೆಸರು ಕಾಳು ಸದ್ಯ ಕಟಾವಿನ ಹಂತಕ್ಕೆ ಬಂದಿದೆ. ಆದರೆ, ಕಟಾವಿನ ವೇಳೆ ನಿರಂತರವಾಗಿ ಮಳೆ ಸುರಿದಿದ್ದರಿಂದ ಹೆಸರು ಸಂಪೂರ್ಣ ನೀರು ಪಾಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ, ರೋಣ, ಶಿರಹಟ್ಟಿ, ಮುಂಡರಗಿ ನರಗುಂದ ಲಕ್ಷ್ಮೇಶ್ವರ ಗದಗ ತಾಲೂಕು ಸೇರಿದಂತೆ ಬಹುತೇಕ ಗ್ರಾಮೀಣ ಪ್ರದೇಶದ ಜಮೀನುಗಳಲ್ಲಿ ಅತಿ ಹೆಚ್ಚು ಹೆಸರು ಬೆಳೆಯನ್ನು ಬೆಳೆಯಲಾಗಿತ್ತು. ಆದರೆ ಅತಿಯಾದ ಮಳೆಯಿಂದ ಹೆಸರು ಬೆಳೆ ನೆಲ ಕಚ್ಚಿದೆ.

ಜಿಲ್ಲೆಯಲ್ಲಿ ವಾಡಿಕೆ‌ಯಾಗಿ 46.9 ಮಿಮೀ ಮಳೆ ಸುರಿಯುತ್ತಿತ್ತು ಇತ್ತು. ಅದು ಈ ಬಾರಿ 140.2 ಮಿಮೀ ಸುರಿದು ದಾಖಲೆ ಬರೆದಿದೆ. ಈ ಮೂಲಕ ಶೇ.198.9ರಷ್ಟು ಅಧಿಕ ಮಳೆ ಸುರಿದಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 292826 ಹೆಕ್ಟೇರ್ ಬಿತ್ತನೆ ಮಾಡಲಾಗಿತ್ತು. 94884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67533 ಹೆಕ್ಟೇರ್ ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಸಮೀಕ್ಷಾ‌ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 31 at 1.21.13 PM

ಹೆಸರು ಬೆಳೆ ಬೆಳೆಯಲು ಪ್ರತಿ ಎಕರೆಗೆ ಹೊಲ ಹದಗೊಳಿಸಲು, ಬಿತ್ತನೆ ಬೀಜ, ಗೊಬ್ಬರ, ಕೂಲಿ ಕಾರ್ಮಿಕರ ಖರ್ಚು ಸೇರಿ  8 ರಿಂದ 10 ಸಾವಿರ ರೂ.ವರೆಗೆ, ಖರ್ಚು ತಗಲುತ್ತದೆ. 10-15 ಎಕರೆ ಹೊಲ ಇರುವ ಕೆಲವು ರೈತರು ಅಂದಾಜು 50 ರಿಂದ 60 ಸಾವಿರ ರೂ ರೂಪಾಯಿವರೆಗೂ ಖರ್ಚು ಮಾಡಿದ್ದಾರೆ. ಹೆಸರು ಬೆಳೆದ ರೈತರು ಅತಿಯಾದ ಮಳೆಯಿಂದ ಬೆಳೆ ಹಾನಿ ಅನುಭವಿಸಿದ್ದಾರೆ. ರೈತರ ಖರ್ಚಿಗೆ ತಕ್ಕ ಇಳುವರಿ ಬಾರದಿರಲು ಮಳೆ ಕಾರಣವಾಗಿದೆ ಎಂದು ಹೆಸರು ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದಾರೆ.

ಹೆಸರು ಕಟಾವು ಯಂತ್ರಗಳು ಪಟ್ಟಣ ಹಾಗೂ ಎಲ್ಲ ಗ್ರಾಮಗಳಲ್ಲಿ ಬೀಡು ಬಿಟ್ಟಿವೆ. ಕೆಲವೆಡೆ ಹೆಸರು ಕಟಾವು ನಡೆಯುತ್ತಿದೆ. ಕಟಾವು ಮಾಡುವ ಯಂತ್ರಕ್ಕೆ ಪ್ರತಿ ಎಕರೆಗೆ ಎರಡು ₹2200 ಇದ್ದು, ತಾಸಿಗೆ ₹1600 ಇದೆ. ಕೂಲಿಗೆ ದಿನಕ್ಕೆ ಒಬ್ಬರಿಗೆ ₹400. ಅಲ್ಪ ಸ್ವಲ್ಪ ಬಂದ ಹೆಸರು ಇದಕ್ಕೆಲ್ಲ ಖರ್ಚು ಆಗಿ, ಏನು ಉಳಿಯುತ್ತಿಲ್ಲ ಎಂದು ರೈತರು ಹೇಳುತ್ತಾರೆ. ಇನ್ನು ಬಹುತೇಕ ಭಾಗಗಳಲ್ಲಿ ಕಟಾವಿಗೆ ಬಂದ ಬೆಳೆ ನಾಶವಾಗಿ ಹಣವೂ ಇಲ್ಲ, ಬೆಳೆಯೂ ಇಲ್ಲ ಎನ್ನುವಂತಾಗಿದೆ.

ಸದ್ಯ ಆರಂಭದ ಮಾರುಕಟ್ಟೆಯಲ್ಲಿ ಹೆಸರು ಕಾಳು ಕ್ಲಿಂಟಲ್‌ಗೆ ₹10 ಸಾವಿರಕ್ಕೂ ಹೆಚ್ಚು ಬೆಲೆ ಇತ್ತು. ಅತಿಯಾದ ಮಳೆಯಿಂದ ಹೆಸರು ಕಾಳು ಹಾಳಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಕುಸಿತಗೊಂಡಿದೆ. 7 ರಿಂದ 8 ಸಾವಿರಕ್ಕೆ ಮಾರಾಟವಾದರೆ ಅದೇ ಹೆಚ್ಚು. ಹೆಸರು ಬೆಳೆಗೆ ಖರ್ಚು ಮಾಡಿದಷ್ಟು ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ ಎಂದು ರೈತರ ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಿರಂತರ ಸುರಿದ ಮಳೆಗೆ ಕಟಾವು ಮಾಡಲು ಅವಕಾಶ ಸಿಗದಂತಾಗಿದೆ. ಕಟಾವು ಯಂತ್ರ ಹೊಲ ಪ್ರವೇಶಿಸಿದರೆ ಹೆಸರು ಕಾಳು ಸಿಡಿದು ಅರ್ಧ ನೆಲದ ಪಾಲು ಆಗುವ ಭೀತಿ ಹೆಚ್ಚಾಗಿದೆ. ಇನ್ನು ಕೂಲಿಕಾರರಿಂದ ಹೆಸರು ಬಿಡಿಸಬೇಕೆಂದರೆ ಸಾಧ್ಯವಾಗುತ್ತಿಲ್ಲ. ಹೆಸರು ಬೆಳೆ ಜಲಾವೃತಗೊಂಡು ಒಣಗಿದ ಹೆಸರು ಮಳೆಯ ಪರಿಣಾಮ ಮೊಳಕೆ ಒಡೆಯುವ ಹಂತಕ್ಕೆ ತಲುಪಿವೆ.

WhatsApp Image 2025 08 31 at 1.20.21 PM 1

ಗದಗ ತಾಲೂಕಿನ ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕರೆಯ ಹೊಲದಲ್ಲಿನ ಹೆಸರು ಬೆಳೆ ಸಂಪೂರ್ಣ ಹಾನಿಗೊಳಗಿದ್ದು, ಇತ್ತ ಬೆಳೆಯೂ ಇಲ್ಲ, ಬೆಲೆಯೂ ಇಲ್ಲ ಎನ್ನುವಂತಾಗಿದೆ. ಕೈಯಲ್ಲಿದ್ದ ಹಣವನ್ನು ಖರ್ಚು ಮಾಡಿ ಬರೀಗೈಯಲ್ಲಿದ್ದೇವೆ ಎಂದು ಅಸಹಾಯಕತೆಯಿಂದ ಹೇಳುತ್ತಾರೆ ಶ್ರೀನಿವಾಸ್.‌

ಇದನ್ನೂ ಓದಿ: ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಈ ಕುರಿತು ಈದಿನ.ಕಾಮ್ ಜೊತೆಗೆ ರೈತ ಸಂಘದ ಮುಖಂಡ ಮೇಘರಾಜ ಬಾವಿ ಮಾತನಾಡಿ, “ಅತಿಯಾದ ಮಳೆ ಆಗಿದ್ದರಿಂದ ಜಿಲ್ಲೆಯಲ್ಲಿ ಹೆಸರು ಬೆಳೆ ಹಾಳಾಗಿದೆ. ಮಾರುಕಟ್ಟೆಯಲ್ಲಿಯೂ ಬೆಲೆ ಕುಸಿತಗೊಳ್ಳುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಕಾರ ಪ್ರತಿ ಎಕರೆಗೆ 50 ಸಾವಿರ ಬೆಳೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ್ ಅವರು ಹಾನಿಗೋಳಗಾದ ಜಮೀನಿಗೆ ಭೇಟಿ ನೀಡಿ, “ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ಸಚಿವರು ತಿಳಿಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...