ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

Date:

ರಂಝಾ‌ನ್ ಸಮಯದಲ್ಲಿ ಉಪವಾಸವು ಮುಸ್ಲಿಮರಿಗೆ ಆತ್ಮಾವಲೋಕನ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಬಡವರ ಬಗ್ಗೆ ಹೆಚ್ಚಿನ ಸಹಾನುಭೂತಿಗೆ ಅವಕಾಶ‌ ಒದಗಿಸುತ್ತದೆ ಎಂದು ಲಾಲಹುಸೇನ ಕಂದಗಲ್ಲ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಮಾಜದಿಂದ ಏರ್ಪಡಿಸಿದ್ದ ಸೌಹಾರ್ದ ಇಫ್ತಾರ್ ಕೂಟದಲ್ಲಿ ‌ಮಾತನಾಡಿದರು.

“ಈ ಅವಧಿಯು ಮುಸ್ಲಿಮರು ಅಲ್ಲಾಹನೊಂದಿಗಿನ ತಮ್ಮ ಸಂಬಂಧವನ್ನು ಗಾಢವಾಗಿಸಲು ಮತ್ತು ಪ್ರಪಂಚದಾದ್ಯಂತ ಮುಸ್ಲಿಮರು ರಂಝಾನ್ ಏಕೆ ಆಚರಿಸುತ್ತಾರೆ ಎಂಬುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತದೆ. ರಂಝಾನ್‌ನ ಮೂಲ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುವ ಮುಸ್ಲಿಮರು ಪ್ರವಾದಿ ಮುಹಮ್ಮದ್ ಅವರಿಗೆ ನೀಡಲಾದ ಮೌಲ್ಯಗಳು ಮತ್ತು ಬೋಧನೆಗಳನ್ನು ಗೌರವಿಸಲು ಪ್ರಯತ್ನಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿಥಿಗಳಾದ ಚಿಂತಕ ಪ್ರೊ ಬಿ ಎ ಕೆಂಚರಡ್ಡಿ‌ ಮಾತನಾಡಿ‌, “ಗಾಂಧಿಯವರ ಕಲ್ಪನೆಯ ರಾಮ-ರಹೀಮ ಇಂದು ನಮಗೆಲ್ಲ ಮಾದರಿಯಾಗಬೇಕು. ಸೌಹಾರ್ದ ಬದುಕೇ ನಮ್ಮ‌ ದೇಶದ ಬೆಳವಣಿಗೆಗೆ ಮುಖ್ಯ ಕಾರಣ” ಎಂದರು.

ತಾಲೂಕು ಕಸಾಪ ಅಧ್ಯಕ್ಷ ಅಮರೇಶ‌ ಗಾಣಗೇರ ಅವರು ಮಾತನಾಡಿ, ಗೋಗೇರಿ ಗ್ರಾಮವು‌ ಸೌರ್ಹಾದತೆಯ ಗ್ರಾಮ. ಈ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿದ ಹಿರಿಯರಿಗೆ ಅಭಿನಂದನೆ ತಿಳಿಸಿದರು.

ಬಸವರಾಜ ಮೂಲಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ, “ಇಂತಹ ಒಳ್ಳೆಯ ಕಾರ್ಯಗಳು ಅನೇಕ ಪಟ್ಟು ಪ್ರತಿಫಲವನ್ನು ನೀಡುತ್ತವೆ. ನಾವೆಲ್ಲ ಸೌಹಾರ್ದತೆಯಿಂದ ಬದುಕೋಣ ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

ಮುಖ್ಯೋಪಾಧ್ಯಯ ಆರ್ ಐ ಭಗವಾನ್ ಕುರ್‌ಆನ್ ಪಠಣ‌ ಮಾಡಿದರು. ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಈರಣ್ಣ ಮೂಲಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಹಾಫಿಜ್ ಫಾರೂಕ ಇಲಕಲ್ಲ, ಶಂಕ್ರಯ್ಯ ಮೇಟಿಮಠ, ಮಹೆಬೂಬ ಭಗವಾನ್, ಮಹಾಂತೇಶ ಹಿರೇಕುರಬರ ಮಾಬುಸಾಬ ನಧಾಪ್, ಹುಚ್ಚುಸಾಬ ಬಡಿಗೇರ, ಕೆ ಕೆ ಭಗವಾನ್, ಐ ಎಚ್ ಭಗವಾನನ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...