“1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯಾದ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ” ಎಂದು ಪ್ರಗತಿಪರ ಚಿಂತಕರಾದ ಬಿ ಎ ಕೆಂಚರೆಡ್ಡಿ ಅವರು ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಸೇವಾಲಾಲ್ ಕಲ್ಯಾಣ ಮಂಟಪದಲ್ಲಿ ನಡೆದ ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ ಯು ಎಸ್ ಸಾಮ್ರಾಜ್ಯಶಾಹಿ ಭಾರತ ಜನತೆಯ ಶತ್ರು ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ನಂತರ ವಕೀಲರಾದ ಎಂ ಎಸ್ ಹಡಪದ ಮತನಾಡಿ, “ಅಮೇರಿಕಾ ಸಾಮ್ರಾಜ್ಯಶಾಹಿಯು ಸಮಾಜವಾದಿ ದೇಶಗಳ ಮೇಲೆ ಅಲ್ಲಿನ ಸಂಪತ್ತನ್ನು ಲೂಟಿ ಮಾಡಲು ನಿರಂತರವಾಗಿ ಮಿಲಿಟರಿ ದಾಳಿ ನಡೆಸಿ ಬೆದರಿಕೆ ಹಾಕುತ್ತಿದೆ” ಎಂದರು.
“ಭಾರತದ ಮೇಲೆ ಮಿಲಿಟರಿ ದಾಳಿಯ ಬದಲಿಗೆ ಇಲ್ಲಿನ ರೈತರ, ಕಾರ್ಮಿಕರ ಪರ ಕಾನೂನುಗಳನ್ನು ಬದಲಾಯಿಸಿ, ಸರಕಾರದ ನೀತಿಗಳನ್ನೇ ಅಮೇರಿಕಾ ಪರ ಮಾಡಿಕೊಂಡಿರುವುದು ಸಾಮ್ರಾಜ್ಯಶಾಹಿ ಕ್ರೂರ ಮುಖಗಳನ್ನು ಅನಾವರಣಗೊಳಿಸಿದೆ. ಕಡಿಮೆ ಬೆಲೆಗೆ ರಷ್ಯಾದಿಂದ ಪಡೆಯುತ್ತಿದ್ದ ತೈಲವನ್ನು ಪಡೆಯಬಾರದು ಎಂದು ಬೆದರಿಕೆ ಹಾಕಿದೆ. ದುಬಾರಿ ಬೆಲೆಯ ತೈಲವನ್ನು ಪಡೆಯ ಬೇಕೆಂಬ ಷರತ್ತು ಜನತೆಯ ಮೇಲೆ ಹೊರೆ ಹಾಕಲು ಮುಂದಾಗಿದೆ. ಹಾಗಾಗಿ ಇದು ಭಾರತ ಜನತೆಯ ಶತ್ರು ಎಂಬುದನ್ನು ನಾವು ತಿಳಿಯಬೇಕು” ಎಂದು ಹೇಳಿದರು
ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಮಾತನಾಡಿ, “ಸಾಮ್ರಾಜ್ಯಶಾಹಿ ನೀತಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸದೇ ಇದ್ದರೆ ಭಾರತ ದೇಶಕ್ಕೆ ಮುಂದೆ ಅಪಾಯವಿದೆ. ಇದರ ವಿರುದ್ಧ ಆಂದೋಲನ ನಡೆಯಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎ.ಡಿ.ಕೋಲಕಾರ್ ಸರ್, ಫಯಾಜ್ ತೋಟದ, ಪೀರು ರಾಠೋಡ, ರೈತ ಮುಖಂಡರು ಕಾವ್ಯ ಸೋಮನಕಟ್ಟಿ, ರೂಪಲೇಶ ಮಾಳೋತ್ತರ, ಬೀದಿ ಬದಿ ವ್ಯಾಪಾರಸ್ಥರ ಸಂಘದ ಎಸ್ ಬಿ ದಿಂಡವಾಡ, ಅಮರೇಶ ಜವ್ಹಾಣ ಕೆ ಸಿ ಗೋಡೆಕಾರ. ರಾಜು ಮಾಂಡ್ರೆ, ಕಟ್ಟಡ ಕಾರ್ಮಿಕರ ಸಂಘದ ಅನಂದ, ರೆವಣಪ್ಪ, ಮೈಬು ಹವಾಲ್ದಾರ್, ಎಸ್ ಎಫ್ ಐ ನ ಗಣೇಶ ರಾಠೋಡ, ಚಂದ್ರು ರಾಠೋಡ, ಶರಣು, ಗುರು, ರಾಹುಲ್ ಯಮನೂರ, ವಿವಿಧ ಕ್ಷೇತ್ರಗಳಲ್ಲಿ ದುಡಿಯವವರು ಕಾರ್ಯಕ್ರಮದಲ್ಲಿದ್ದು ಸಂವಾದದಲ್ಲಿ ಭಾಗವಹಿಸಿದ್ದರು.





