ಗದಗ | ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ರೇಣುಕಾಚಾರ್ಯರ ತತ್ವಗಳು ಆದರ್ಶ: ಸಚಿವ ಎಚ್.ಕೆ. ಪಾಟೀಲ್

Date:

“ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ. ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಅವರ ತತ್ವಗಳು ಆದರ್ಶವಾಗಿವೆ” ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಹೇಳಿದರು.

ಗದಗ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ರವಿವಾರ (ಮಾರ್ಚ್ 01 ರಂದು) ಆಯೋಜಿಸಲಾಗಿದ್ದ ‘ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ – 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

“ರೇಣುಕಾಚಾರ್ಯರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲ ಜೀವಾತ್ಮರಿಗೂ ಲೇಸನ್ನು ಬಯಸುವ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ. ದಯೆ, ಕರುಣೆ, ಅಹಿಂಸೆ ಮತ್ತು ಸತ್ಯದ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಜಯಂತಿಗಳು ಕೇವಲ ಅಧಿಕಾರಿಗಳ ಕಾರ್ಯಕ್ರಮವಾಗದೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಅರ್ಥಪೂರ್ಣವಾಗಬೇಕು. ಜಿಲ್ಲಾ ರಂಗಮಂದಿರವು ಇಂತಹ ಸಾಂಸ್ಕೃತಿಕ ಮತ್ತು ವೈಚಾರಿಕ ಕಾರ್ಯಕ್ರಮಗಳಿಂದ ಸದಾ ತುಂಬಿರಲಿ” ಎಂದು ಆಶಿಸಿದರು.

“ಇಂದಿನ ದಿನಗಳಲ್ಲಿ ಶ್ರೀಮಂತ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಯುದ್ಧ ಮತ್ತು ಹಿಂಸೆಯ ವಾತಾವರಣವು ಆತಂಕಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಯ ಶಾಂತಿ ಮಂತ್ರ ಮತ್ತು ರೇಣುಕಾಚಾರ್ಯರ ತತ್ವಗಳು ಜಗತ್ತಿಗೆ ದಾರಿದೀಪವಾಗಲಿ” ಎಂದು ಸಚಿವ ಡಾ. ಎಚ್ ಕೆ ಪಾಟೀಲ ಹಾರೈಸಿದರು.

ಉಪನ್ಯಾಸಕರಾದ ಡಾ. ಜಯಶ್ರೀ ಮಲ್ಲಿಕಾರ್ಜುನ್ ಹೊಸಮನಿ ಮಾತನಾಡಿ, “ಜಗದ್ಗುರು ರೇಣುಕಾಚಾರ್ಯರು ಅಗಸ್ತ್ಯ ಮಹರ್ಷಿಗಳಿಗೆ ಬೋಧಿಸಿದ ‘ಶಿವಾದ್ವೈತ ಸಿದ್ಧಾಂತ’ವು ‘ಸಿದ್ಧಾಂತ ಶಿಖಾಮಣಿ’ ಗ್ರಂಥದ ಮೂಲಕ ನಮಗೆ ಲಭ್ಯವಾಗಿದೆ. ಈ ಗ್ರಂಥವು ಅಷ್ಟಾವರಣ, ಪಂಚಾಚಾರ ಮತ್ತು ಷಟಸ್ಥಲಗಳ ಮೂಲಕ ಮನುಷ್ಯನು ಹೇಗೆ ಮುಕ್ತಿಯನ್ನು ಪಡೆಯಬಹುದು ಎಂಬುದನ್ನು ಹಂತ-ಹಂತವಾಗಿ ವಿವರಿಸುತ್ತದೆ. ಮನುಷ್ಯ ಜನ್ಮವು ಅತ್ಯಂತ ದುರ್ಲಭವಾದುದು. ಜೀವನದಲ್ಲಿ ಸಾರ್ಥಕತೆ ಪಡೆಯಲು ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ, ದಯೆ, ಕ್ಷಮೆ, ದಾನ, ಪೂಜೆ, ಜಪ ಮತ್ತು ಧ್ಯಾನ ಎಂಬ ಹತ್ತು ಧರ್ಮ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು” ಎಂದರು.

ರೇಣುಕಾಚಾರ್ಯರು ಅಂದಿನ ಕಾಲದಲ್ಲೇ ಮಹಿಳೆಯರಿಗೆ ಸಮಾನ ಗೌರವ ನೀಡಿದ್ದರು. ಲಿಂಗಧಾರಣೆ ಮಾಡಿದವರೆಲ್ಲರೂ ಸಮಾನರು ಎಂಬ ತತ್ವದ ಮೂಲಕ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ. ಬಸವರಾಜ ಬಳ್ಳಾರಿ, ಶ್ರೀನಿವಾಸ್ ಮೂರ್ತಿ, ಎಸ್ ಎನ್ ಬಳ್ಳಾರಿ,  ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು, ಸಾರ್ವಜನಿಕರು ಉಪಸ್ಥಿತರಿದ್ದರು.  ಕು. ಅಕ್ಷತಾ ಹಿರೇಮಠ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತ ಪಡಿಸಿದರು. ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...