ಗದಗ | ಗಣರಾಜ್ಯೋತ್ಸವ ದಿನಾಚರಣೆ, ಜವಾಬ್ದಾರಿ ನಿಭಾಯಿಸಬೇಕು : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ

Date:

ಜನೇವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಾತನಾಡಿದರು.

“ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆ7.30 ರೊಳಗೆ ನೆರವೇರಿಸಿ ಬೆ.8.30 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆ.9 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು” ಎಂದು ಸೂಚಿಸಿದರು.

“ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಆದ್ಯತೆ ವಹಿಸಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದAತೆ ನಿಗಾವಹಿಸಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ. ಇಲಾಖಾಧಿಕಾರಿಗಳಿಗೆ ಗಣರಾಜ್ಯೋತ್ಸವದ ಆಚರಣೆ ಕುರಿತಂತೆ ವಹಿಸಲಾಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು” ಎಂದು ಹೇಳಿದರು.

ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್ಎಸ್ಎಸ್ ಹಾಗೂ ಎನ್ಸಿಸಿ ಪರೇಡ, ಮೂಲಭೂತ ಸೌಕರ್ಯಗಳ ವ್ಯವಸ್ಥೆ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...