ಗದಗ | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡ ಆರ್.ಎಸ್.ಎಸ್: ಮುತ್ತು ಬಿಳಿಯಲಿ ಆರೋಪ

Date:

“ಹೆಸರಿಗಷ್ಟೇ ಸಹಮಿಲನ ಕಾರ್ಯಕ್ರಮ. ಆದರೆ ಆರ್.ಎಸ್.ಎಸ್ ಸಿದ್ಧಾಂತ ತತ್ವಗಳನ್ನು, ಹಿಂದುತ್ವ ವಿಚಾರಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದುರ್ಬಳಕೆ ಮಾಡಿಕೊಂಡು ಅಂಗನವಾಡಿ ಶಿಕ್ಷಕಿಯರ ತಲೆಗೆ ತುಂಬಿ, ಆರ್.ಎಸ್.ಎಸ್ ಪ್ರಚಾರ ಮಾಡಲು ಸರ್ಕಾರಿ ಶಿಕ್ಷಕಿಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ದಲಿತ ಹೋರಾಟಗಾರ ಮುತ್ತು ಬಿಳಿಯಲಿ ಆರೋಪಿಸಿದರು.

ಗದಗ ನಗರದ ಶ್ರೀ ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆರ್.ಎಸ್.ಎಸ್‌ ಅಂಗ ಸಂಸ್ಥೆ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಕರ್ನಾಟಕ ಸರ್ಕಾರದ ಭಾಗವಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಸುಮಾರು ಐದುನೂರು ಅಂಗನವಾಡಿ ಶಿಕ್ಷಕಿಯರಿಗೆ ಸಹಮಿಲನ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಪ್ರಶಿಸಿದ್ದಾರೆ.

“ಈ ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಯ ವಿಧಾನ ಪರಿಷತ್ ಸದಸ್ಯರು ಎಸ್ ವಿ ಸಂಕನೂರ ಅವರು ಉದ್ಘಾಟಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಮಾರು ಐದುನೂರು ಅಂಗನವಾಡಿ ಶಿಕ್ಷಕಿಯರು ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಗನವಾಡಿ ಶಿಕ್ಷಕಿಯರಿಗೆ ಸರ್ಕಾರದ ವತಿಯಿಂದ ಅನೇಕ ತರಬೇತಿ ಹಾಗೂ ಮಾಹಿತಿ ಶಿಬಿರಗಳು, ಕಾರ್ಯಾಗಾರಗಳು ಇಲ್ಲಿಯವರೆಗೂ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದವು. ನಡೆಯಬೇಕು. ಆದರೆ ಈ ಕಾರ್ಯಕ್ರಮವು ಸರ್ಕಾರಕ್ಕೂ ಸಂಬಂಧ ಇಲ್ಲದ, ದೇಶದಲ್ಲೇ ನೊಂದಣಿಯಾಗದ ಸಂಘಟನೆಯಿಂದ ಸರ್ಕಾರಿ ನೌಕರರಿಗೆ ಈ ಸಹಮಿಲನ ಕಾರ್ಯಕ್ರಮ” ಏರ್ಪಡಿಸಿರುವುದನ್ನು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮದ ಉದ್ದೇಶ ಏನು ಇಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಪರವಾನಿಗೆ ಕೊಟ್ಟಿದ್ದಾರೆಯೇ? ಸ್ಥಳಿಯ ಶಾಸಕರ ಗಮನಕ್ಕೆ ಈ ಕಾರ್ಯಕ್ರಮದ ಕುರಿತು ಮಾಹಿತಿ ಇದೆಯೇ? ಎಂಬುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಈ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ‘ಆರ್.ಎಸ್.ಎಸ್ ನಮ್ಮ ಸೈದ್ದಾಂತಿಕ ವಿರೋಧಿ’ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಾರೆ. ಆದರೆ ತಮ್ಮದೇ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಅದೇ ಆರ್.ಎಸ್.ಎಸ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” 

“ಈ ಕಾರ್ಯಕ್ರಮದ ಕುರಿತು ಗದಗ ಜಿಲ್ಲಾಧಿಕಾರಿಗಳ ಪರವಾನಿಗೆ ಇದೆಯೇ? ಪರವಾನಿಗೆ ತೆಗೆದುಕೊಳ್ಳದೇ ಕಾನೂನು ಬಾಹಿರವಾಗಿ ಸರ್ಕಾರಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡ ಸಂಘಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು  ದಲಿತ ಸಂಘಟನೆಗಳ ಒಕ್ಕೂಟದಿಂದ ಆಗ್ರಹಿಸುತ್ತೇವೆ ಎಂದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...