ಗದಗ | ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ

Date:

ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ಜಯಂತಿಯ ಶುಭಾಶಯ ಕೋರಿದರು. ಸೇವಾಲಾಲ್ ಅವರ ತತ್ವಗಳು ಇಂದಿನ ಯುವಜನತೆಗೆ ದಾರೀ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಇಂದಿನ ಯುವ ಜನತೆಗೆ ತಿಳಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಹೇಳಿದ್ದಾರೆ.

ಗದಗ ಜಿಲ್ಲಾಡಳಿತ ಭವನದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಬಂಜಾರ ಸಮುದಾಯವು ಪ್ರಾಮಾಣಿಕ, ಕಾಯಕ ನಿಷ್ಠ ಸಮಾಜವಾಗಿದೆ. ಸಂತ ಸೇವಾಲಾಲ್‍ರ ನಿಷ್ಠೆ, ಪ್ರಾಮಾಣಿಕತೆ, ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವ ಮೂಲಕ ಅವರಿಗೆ ಗೌರವ ಸಮರ್ಪಿಸೋಣ” ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ಗಣ್ಯರು, ಮುಖಂಡರುಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...