ಗದಗ | ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ: ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಸೂಚನೆ

Date:

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಸರ್ಕಾರಿ ಸೌಲಭ್ಯಗಳನ್ನು ಸೂಕ್ತ ಸಮಯದಲ್ಲಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ನಡೆಎದ ‘ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ’ಯಲ್ಲಿ ಪ್ರವಾಹದಿಂದ ಸ್ಥಳಾಂತರಗೊಂಡ ಕುಟುಂಬಗಳು, ಕಳಪೆ ರಸ್ತೆ ಕಾಮಗಾರಿ, ಅಂಬೇಡ್ಕರ್ ವೃತ್ತದಲ್ಲಿ ಬೀದಿ ದೀಪಗಳ ವ್ಯವಸ್ಥೆ, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ, ಹಕ್ಕುಪತ್ರಗಳ ವಿತರಣೆ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಂದ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿ ಆಲಿಸಿದರು.

“ಸರ್ಕಾರದಿಂದ ಬಿಡುಗಡೆಯಾಗಿರುವ ಎಸ್‌ಸಿಪಿ/ ಟಿಎಸ್‌ಪಿ ಅನುದಾನ ಸದ್ಭಳಕೆಯಾಗಬೇಕು. ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್ ನೇಮಗೌಡ ಮಾತನಾಡಿ, “ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳನ್ನು ವಿಳಂಬ ಮಾಡದೇ ಕೂಡಲೇ ದಾಖಲಿಸಿಕೊಳ್ಳಬೇಕು. ಅದೇ ರೀತಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿಕೊಳ್ಳಬೇಕು. ಅನಗತ್ಯವಾಗಿ ವಿಳಂಬ ತೋರಿದಲ್ಲಿ, ಅಂತಹ ಪೊಲೀಸ್ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಡಿವೈಎಸ್‌ಪಿ ಎಂ.ಬಿ ಸಂಕದ, ವೈ.ಎಸ್ ವಾಗದ ಗೌಡರ, ತಮ್ಮರಾಯ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...