ಗದಗ | ಶಾಲೆಗಳ ಆರಂಭದ ದಿನವೇ ಶಾಲಾ ಬಸ್‌ ಅಪಘಾತ; ಚಾಲಕನಿಗೆ ಗಂಭೀರ ಗಾಯ

Date:

ಮೇ 9ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ಎರಡು ತಿಂಗಳ ವಿರಾಮದ ಬಳಿಕ, ಮಕ್ಕಳು ಮತ್ತೆ ಶಾಲೆಗಳಿಗೆ ಹೊರಟಿದ್ದಾರೆ. ಶಾಲೆಗಳಲ್ಲಿ ಸಂಭ್ರಮದ ವಾತಾವರಣವಿದೆ. ಹಲವು ಶಾಲೆಗಳಲ್ಲಿ ಸಂಭ್ರಮಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಶಾಲೆಯೊಂದರ ಶಾಲಾ ಬಸ್‌ ಅಪಘಾತಕ್ಕೀಡಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಆರ್‌.ಕೆ ನಗರ ಬಳಿಯ ಅಂಡರ್‌ಪಾಸ್‌ನಲ್ಲಿ ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮದ ಶಾಲೆಯ ಬಸ್‌ ಪಲ್ಟಿಯಾಗಿದೆ. ಬಸ್‌ಗೆ ಹಿಂದಿನಿಂದ ಕ್ಯಾಂಟರ್‌ವೊಂದು ಡಿಕ್ಕಿ ಹೊಡೆದಿದ್ದರಿಂದ, ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಬಸ್‌ನಲ್ಲಿ ಯಾವುದೇ ಮಕ್ಕಳು ಇಲ್ಲದ್ದರಿಂದ, ಭೀಕರ ಘಟನೆಯೊಂದು ತಪ್ಪಿದೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...