ಗದಗ | ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸಲು SDPI ಆಗ್ರಹ

Date:

“ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ  ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಇಂದು ಗದಗ ಪಟ್ಟಣದ ಪತ್ರಕಾ ಭವನದಲ್ಲಿ ಸುದ್ದಿಗೋಷ್ಠಿ ಮಾಡಲಾಯಿತು.

ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷರು ಬಿಲಾಲ್ ಗೋಕಾವಿ, “ನಮ್ಮ ಪಕ್ಷದ ವತಿಯಿಂದ ಈಗಾಗಲೇ ಜನತಾ ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಹಲವು ಜ್ವಲಂತ ಸಮಸ್ಯೆಗಳು ಇದ್ದು, ಜಿಲ್ಲೆಯ ಯುವಕ ಯುವತಿಯರಿಗೆ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಸ್ಥಾಪನೆ ಜೊತೆಗೆ ಉತ್ತೇಜನ ನೀಡಬೇಕು” ಎಂದು ಒತ್ತಾಯಿಸಿದರು.

“24*7 ಕುಡಿಯುವ ನೀರಿನ  ಅಪೂರ್ಣ ಯೋಜನೆ ಶೀಘ್ರದಲ್ಲಿ ಪೂರ್ಣಗೊಳಿಸಲು ಯೋಜನೆ ಜಾರಿಗೊಳಿಸಬೇಕು. ಗದಗ ನಗರ ಕೇಂದ್ರದಲ್ಲಿ ರಕ್ತ ಭಂಡಾರ ನಿರ್ಮಿಸುವುದು, ವಿಶ್ವವಿದ್ಯಾಲಯ ಸ್ಥಾಪನೆ, ಬೆಟಗೇರಿ ಭಾಗದಲ್ಲಿ ಅಲ್ಪಸಂಖ್ಯಾತ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣ, ಅಲ್ಪಸಂಖ್ಯಾತ  ಹಾಸ್ಟೆಲ್ ನಿರ್ಮಾಣ, ನರಗುಂದ ಹಾಗೂ ಗದಗ ನಗರದಲ್ಲಿ ಅಲ್ಪಸಂಖ್ಯಾತರ  ಶಾದಿ ಮಹಲ್ ನಿರ್ಮಾಣ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನರಗುಂದದಲ್ಲಿ ನಿರ್ಮಿಸುತ್ತಿರುವ  ಆಚಾರ್ಯ ಪ್ಲಾಟ್ ಮನೆಗಳ ಸಂಖ್ಯೆ ಹೆಚ್ಚಿಸಬೇಕು. ಶಿರಹಟ್ಟಿ ಪಟ್ಟಣದಲ್ಲಿ ಅನಾವರಣಗೊಂಡು ದುಸ್ಥಿತಿಗೆ ನಿಂತ ಎಪಿಎಂಸಿ ಮಾರುಕಟ್ಟೆ ಸಮರ್ಪಕ ಬಳಕೆಗೆ ವಿಶೇಷ ಯೋಜನೆ ರೂಪಿಸಬೇಕಿದೆ. ಜಿಲ್ಲೆಯ ಈ ಎಲ್ಲ ಸಮಸ್ಯೆಗಳಿಗೆ ಈ ಬಜೆಟ್ ಮಂಡನೆಯಲ್ಲಿ ವಿಶೇಷ ಹಣಕಾಸು ಪ್ಯಾಕೇಜ್ ನೀಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ತರಾಫ್ದರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಜಿಲ್ಲಾ ಖಜಾಂಚಿ ಮದಾರ್ ಶಾಹ್ ಮಕಾನದಾರ್, ಗದಗ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮೀರ್ ಕೊಟ್ಟೂರ್,ಶಿರಹಟ್ಟಿ ಕ್ಷೇತ ಸಮಿತಿ ಅಧ್ಯಕ್ಷರು ಇಸ್ಮಾಯಿಲ್ ನದಾಫ್ ಹಾಗೂ ಕಾರ್ಯದರ್ಶಿ ಅಬ್ದುಲ್ಖಾದರ್  ಕಾಗದಗಾರ,  ಫಯಾಜ್ ಪಟೇಲ್,  ಮುಸ್ತಾಕ್ ಹೊಸಮನಿ, ಮುಬಾರಕ್ ಗದಗ, ಮುಸ್ತಾಕ್ ಕಟ್ಟಿಮನಿ, ಅಷ್ಪಾಕ್ ಧಾರವಾಡ, ವಾಸೀಮ್ ರಬಕವಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ಸುಮಯ್ಯ ಬಳ್ಳಾರಿ, ಕಾರ್ಯದರ್ಶಿ ಕಾಜಲ್ ಬಾಗೇವಾಡಿ  ಉಪಸ್ಥಿತರಿದ್ದವರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...