‌ಗದಗ | ಹಿರಿಯ ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ನಿಧನ; ಸಚಿವ ಎಚ್ ಕೆ ಪಾಟಿಲ್ ಶೋಕ

Date:

ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ವಿಜೇತ ಶಾಂತಾರಾಮ ಹೆಗಡೆ(ಶೀಗಿಹಳ್ಳಿ) ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟಿಲ್ ಅವರು ಶೋಕ ವ್ಯಕ್ತಪಡಿಸಿದ್ದಾರೆ.

“ಶಿರಸಿಯ ತೋಟಗಾರಿಕೆ ಸೇಲ್ಸ್ ಸೋಸೈಟಿಯ ಅಧ್ಯಕ್ಷರಾಗಿ ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿ, ರಚನಾತ್ಮಕ ಕೆಲಸಗಳ ಮೂಲಕ ಸಹಕಾರ ಕ್ಷೇತ್ರದ ಗಮನ ಸೆಳೆದು ಮಾದರಿಯಾದವರು. ಉತ್ತರ ಕನ್ನಡ ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ, ಮಾಡರ್ನ್ ಎಜ್ಯುಕೇಷನ್ ಸೋಸೈಟಿಯ ಅಧ್ಯಕ್ಷರಾಗಿ, ಸಹಕಾರಿ ಬ್ಯಾಂಕುಗಳ ನಿರ್ದೇಶಕರಾಗಿ ಶಾಂತಾರಾಮ ಹೆಗಡೆ ಅವರು ಅಚ್ಚಳಿಯದ ಸೇವೆ ಸಲ್ಲಿಸಿದ್ದಾರೆ. ಅವರ ಈ ಸೇವೆಗೆ ಸರ್ಕಾರ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಅಲ್ಲದೇ ಗದುಗಿನ ಕೆ‌ ಎಚ್ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಕೆ ಎಚ್ ಪಾಟಿಲ್ ಪ್ರಶಸ್ತಿ ನೀಡಿ ಗೌರವಿಸಿದೆ”‌ ಎಂದರು.

“ಸಹಕಾರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಧಾರ್ಮಿಕ, ಬ್ಯಾಂಕಿಂಗ್ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಶಾಂತಾರಾಮ ಹೆಗಡೆ ಅವರು ಅನುಪಮ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದಾಗಿ ನಾನು ಓರ್ವ ಹಿತೈಷಿಯನ್ನು ಹಾಗೂ ಸಮಾಜದ ನಿಷ್ಠಾವಂತ ಸೇವಕನನ್ನು ಕಳೆದುಕೊಂಡಂತಾಗಿದೆ” ಎಂದು ದುಃಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಸಾರ್ವಜನಿಕರ ಅಹವಾಲು ತ್ವರಿತವಾಗಿ ಇತ್ಯರ್ಥಪಡಿಸಿ: ಸಚಿವ ಕೆ ಹೆಚ್ ಮುನಿಯಪ್ಪ

“ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ, ಬಂಧುಗಳಿಗೆ ನೀಡಲಿ” ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...