ಗದಗ | ಅವೈಜ್ಞಾನಿಕ ಒಳಚರಂಡಿ ನಿರ್ಮಾಣದಿಂದ ರಸ್ತೆ ಮೇಲೆ ಹರಿದ ಕೊಳಚೆ ನೀರು: ಸಾರ್ವಜನಿಕರು ಹೈರಾಣು

Date:

ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣದಿಂದ ಮಾಡಿರುವುದರಿಂದ ಚರಂಡಿಯ ಕೊಳಚೆ ನೀರು ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಗಬ್ಬೆದ್ದು ನಾರುತ್ತಿರುವ ಕೊಳಚೆ ನೀರಲ್ಲಿಯೇ ನಡೆದಾಡುವ ದುಃಸ್ಥಿತಿ ಎದುರಾಗಿದ್ದು, ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಜನರ ಬದುಕು ಹೈರಾಣಾಗಿದೆ.

ಐತಿಹಾಸಿಕ ದೇವಾಲಯಗಳು, ಬಾವಿಗಳು ಇರುವಂತಹ ಲಕ್ಕುಂಡಿ ಐತಿಹಾಸಿಕ ಗ್ರಾಮವಾಗಿದೆ. ಆದರೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಅವೈಜ್ಞಾನಿಕವಾಗಿ ಒಳಚರಂಡಿ ನಿರ್ಮಾಣ ಮಾಡಿರುವುದರಿಂದ ಚರಂಡಿ ನೀರು ರಸ್ತೆ ಮೇಲೆಲ್ಲ ಹರಿಯುತ್ತಿದೆ. ಇದರಿಂದ ಕೇವಲ ಸ್ಥಳೀಯ ಜನಸಾಮಾನ್ಯರಲ್ಲದೆ ಪ್ರವಾಸಿಗರೂ ಕೂಡ ಕೊಳಚೆ ನೀರಿನಲ್ಲಿಯೇ ನಡೆದಾಡುವ ಪರಿಸ್ಥಿತಿ ಉಂಟಾಗಿದೆ.

ಲಕ್ಕುಂಡಿ ಗ್ರಾಮದ ಭೀಮಾಂಬಿಕಾ ದೇವಸ್ಥಾನದ ಬಳಿ ಇರುವ ಶೌಚಾಲಯ ಗ್ರಾಮದ ಓಣಿಯಲ್ಲಿ ಚರಂಡಿ ನೀರಿನಿಂದಲೇ ತುಂಬಿರುವ ಅಗಳತ ಕೆರೆಯ ನೀರನ್ನು ಗ್ರಾಮ ಪಂಚಾಯಿತಿಯು ಬುಧವಾರ ಅವೈಜ್ಞಾನಿಕವಾಗಿ ಯುಜಿಡಿ ಮೂಲಕ ಹರಿಸಿದೆ. ಇದರಿಂದ ಗ್ರಾಮದ ರೈತರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 10 ವರ್ಷಗಳ ಹಿಂದೆ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಒಳಚರಂಡಿಗೆ ದುರಸ್ತಿಯ ಅಗತ್ಯವಿದೆ. ಇದನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಅಧ್ಯಕ್ಷರಾಗಲಿ, ಸದಸ್ಯರಾಗಲಿ ಸರಿಪಡಿಸುವ ಆಸಕ್ತಿ ತೋರಿಸುತ್ತಿಲ್ಲ” ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. 

ರಸ್ತೆಯ ನಡುವೆ ಚೇಂಬರ್ ನಿರ್ಮಾಣ ಮಾಡಿದ್ದು, ಇದರ ಮೂಲಕ ಚರಂಡಿ ನೀರು ಹೊರಬಂದು ಮಹಾದ್ವಾರದಲ್ಲಿ ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಮುಂದಾಲೋಚನೆ ಇಲ್ಲದೆ ಇಂತಹ ಅವ್ಯವಸ್ಥೆಗೆ ಕಾರಣವಾಗಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

IMG 20251010 130913

ಪೌರಕಾರ್ಮಿಕರಿಗೆ ಸ್ವಚ್ಛತಾ ಪರಿಕರಗಳೇ ಇಲ್ಲ: ಒಳಚರಂಡಿಗಳನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರಿಗೆ ಗ್ರಾಮ ಪಂಚಾಯಿತಿಯಿಂದ ಸ್ವಚ್ಛತಾ ಪರಿಕರಗಳನ್ನು ಕೊಡಬೇಕಿತ್ತು. ಪರಿಕರಗಳಿಲ್ಲದೇ ಪೌರಕಾರ್ಮಿಕರು ಒಳಚರಂಡಿಯನ್ನು ಸ್ವಚ್ಛತೆ ಮಾಡುತ್ತಿದ್ದಾರೆ.

ಬೆಳೆ ಹಾಳು: ಹೊಲಸು ನೀರು ಗ್ರಾಮದ ಹೊರಭಾಗದಲ್ಲಿರುವ ಜಮೀನಿಗೆ ನುಗ್ಗುವುದರಿಂದ ಬೆಳೆಯೂ ನಾಶವಾಗುತ್ತಿದೆ. ನೀರು ಸರಾಗವಾಗಿ ಹರಿದು ಹೋಗಲು ಗಟಾರ್ ನಿರ್ಮಾಣ ಇಲ್ಲದ್ದರಿಂದ ಮಳೆನೀರು ಮತ್ತು ಚರಂಡಿ ನೀರು ಹರಿದು ಜಮೀನುಗಳಿಗೆ ನುಗ್ಗಿ ಬೆಳೆಹಾಳಾಗುತ್ತಿದೆ. ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ಮಾಡಿರುವುದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತಿದೆ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿದ್ದೀರಾ? ನಿರ್ಮಾಣ ಕಂಪನಿ ನಿರ್ಲಕ್ಷ್ಯಕ್ಕೆ ಮೂರು ವಲಸೆ ಕಾರ್ಮಿಕರ ಸಾವು: 25 ಲಕ್ಷ ಪರಿಹಾರಕ್ಕೆ CWFI ಆಗ್ರಹ

ಗ್ರಾಮಸ್ಥ ಫಕೀರಪ್ಪ ಮಾತನಾಡಿ, “ಸರಿಯಾಗಿ ಚರಂಡಿ ನಿರ್ಮಾಣ ಮಾಡಿಲ್ಲ. ಚರಂಡಿ ನೀರು ಹೊರಬಂದು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಓಣಿ ತುಂಬೆಲ್ಲ ಗಬ್ಬುನಾತ ಬೀರುತ್ತಿದ್ದು, ಸಾರ್ವಜನಿರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ. ಆದಷ್ಟು ಬೇಗ ಚರಂಡಿ ನೀರು ಹೊರಬರದಂತೆ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ” ಎಂದು ಮನವಿ ಮಾಡಿದರು.

ಮ್ಯಾನುವೆಲ್ ಸ್ಕ್ಯಾವೆಂಜರ್ಸ ಸಮೀಕ್ಷಾ ಸಮಿತಿ ಜಿಲ್ಲಾ ಸಂಯೋಜಕರು ರಮೇಶ ಕೋಳೂರು ಮಾತನಾಡಿ, “ಪೌರಕಾರ್ಮಿಕರಿಂದ ಸಫಾಯಿ ಕರ್ಮಚಾರಿ ಹಾಗೂ ಸ್ವಚ್ಛತಾಗಾರರಿಗೆ ಸುರಕ್ಷಿತ ಪರಿಕರಗಳನ್ನು ನೀಡದೆ ಚೆಂಬರ್‌ಗಳನ್ನು ಸ್ವಚ್ಛತೆ ಮಾಡಿಸುತ್ತಿರುವುದರಿಂದ ಕಾರ್ಮಿಕರ ಅರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಎಂ ಎಸ್ ಕಾಯ್ದೆ-2013ರ ಪ್ರಕಾರ ಕಾನೂನು ಉಲ್ಲಂಘನೆಯಾಗಿದೆ. ಗದಗ ಜಿಲ್ಲಾಡಳಿತ ಈಗಲಾದರೂ ಸುರಕ್ಷಿತ ಪರಿಕಗಳನ್ನು ಒದಗಿಸಬೇಕು. ಜತೆಗೆ ಇಂತಹ ಕಾರ್ಮಿಕರಿಗೆ ತಿಳುವಳಿಕೆ ಕಾರ್ಯಾಗಾರ ಮಾಡಿ ಸ್ವಚ್ಚತಾ ಪರಿಕರಗಳನ್ನು ಉಪಯೋಗಿಸುವಂತೆ ನಿರ್ದೇಶಿಸಬೇಕು” ಎಂದು ಒತ್ತಾಯಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...