ಗದಗ | ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಲು ಎಸ್‌ಎಫ್‌ಐ ಆಗ್ರಹ

Date:

ಪಟ್ಟಣ ಪ್ರದೇಶಗಳಿಗೆ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗಾಗಿ ಸಾಮಾನ್ಯ ಜನರು ದಿನನಿತ್ಯ ಬರುತ್ತಾರೆ. ಆದರೆ, ಅವರ ಪ್ರಯಾಣಕ್ಕೆ ಅನುಕೂಲರ ಸಾರಿಗೆ ವ್ಯವಸ್ಥೆಯಿಲ್ಲ. ಹಳ್ಳಿಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್‌ಎಫ್‌ಐ ಪ್ರತಿಭಟನೆ ನಡೆಸಿದೆ.

ಗಜೇಂದ್ರಗಡದ ಬಸ್‌ ಡಿಪೋ ಎದುರು ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರು ಡಿಪೋ ಮ್ಯಾನೇಜರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಮುಖಂಡ ಗಣೇಶ ರಾಠೋಡ್, “ಗಜೇಂದ್ರಗಡ ತಾಲೂಕು ಶೈಕ್ಷಣಿಕವಾಗಿ ದಿನೇ ದಿನೇ ಬೆಳೆಯುತ್ತಿರುವ ನಗರವಾಗಿದೆ. ಸುತ್ತಲಿನ ಹಳ್ಳಿಗಳಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಆದರೆ, ಅವರಿಗೆ ಸರಿಯಾಗಿ ಬಸ್ ಸೌಕರ್ಯ ಇಲ್ಲದೇ ಶಿಕ್ಷಣ ವಂಚಿತರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್‌ ಸಮಸ್ಯೆ ಕುರಿತು ಹಲವಾರು ಭಾರಿ ನಾವು ಪ್ರತಿ ಶೈಕ್ಷಣಿಕ ವರ್ಷ ಆರಂಭವಾದ ಸಂದರ್ಭದಲ್ಲಿ ಹೋರಾಟ ಮಾಡಿಯೇ ಪರಿಹರಿಸುವ ಸ್ಥಿತಿ ನಿರ್ಮಾಣ ಆಗಿದೆ. ಇದನ್ನು ಗಂಭೀರ ಎಂದು ಪರಿಗಣಿಸಿ ಸಮಸ್ಯೆ ಪರಿಹಾರಕ್ಕೆ ಮಾನ್ಯ ಡಿಪೋ ಮ್ಯಾನೇಜರ್ ಅವರು ಗಮನಹರಿಸಬೇಕು” ಎಂದರು.

ಚಂದ್ರು ರಾಠೋಡ್ ಮಾತನಾಡಿ, “ನಮಗೆ ನಾಗರಸಕೊಪ್ಪ, ನಾಗರಸಕೊಪ್ಪ ತಾಂಡಾ, ಮಾಟರಂಗಿ, ಬೆಣಚಮಟ್ಟಿ ಈ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ತೀವ್ರ ಇದ್ದು ನಾಗರಸಕೊಪ್ಪ ಕ್ರಾಸ್ ಗೆ ಎಲ್ಲಾ ಬಸ್ ಗಳನ್ನು ನಿಲ್ಲಿಸಬೇಕು ಮತ್ತು ಮಾಟರಂಗಿಯಿಂದ ಬೆಳ್ಳಿಗ್ಗೆ ಬರುವ ಬಸ್ ನ್ನು ಮತ್ತೆ ಮಧ್ಯಾಹ್ನ ಮರಳಿ ಬಿಡಬೇಕೆಂದು ಮತ್ತು ಮಾಟರಂಗಿ, ನಾಗರಸಕೊಪ್ಪ, ನಾಗರಸಕೊಪ್ಪ ತಾಂಡಾ, ಬೆಣಚಮಟ್ಟಿ ಮಾರ್ಗವಾಗಿ ಬೆಳ್ಳಿಗ್ಗೆ ಮತ್ತು ಮಧ್ಯಾಹ್ನ ಎರಡು ಸಮಯದಲ್ಲಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಹಕ್ಕೊತ್ತಾಯ ಪತ್ರ ಸ್ವೀಕರಿಸಿ ಮಾತನಾಡಿದ ಪ್ರಭಾರಿ ಡಿಪೋ ಮ್ಯಾನೇಜರ್, “ಸಮಸ್ಯೆ ಬಗೆಹರಿಸಲು ಕಾಲಾವಕಾಶಬೇಕು. ಹೊಸ ಡಿಪೋ ಮ್ಯಾನೇಜರ್ ಬಂದ ಕೂಡಲೇ ಸಮಸ್ಯೆ ಬಗ್ಗೆ ಅವರಿಗೆ ತಿಳಿಸಿ, ಬಸ್‌ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಶರಣು ಎಂ, ಬಸವರಾಜ, ದ್ಯಾಮಾಣ್ಣ ಪೂಜಾರ್, ಪರಶುರಾಮ ಕೊನಸಾಗರ, ಬಸು ಪಾಟೀಲ್, ಸುಭಾಷ್ ಬಡಿಗೇರ, ವಿಜಯ ಮಡಿವಾಳ, ಬಸು ಹಗೇದಾಳ, ನೀಲಕಂಠ ಕರಡಿ, ಬಸವರಾಜ ನಾಗರಾಳ, ಮಾಹಾಂತೇಶ ಜೋಗಿ, ಅರುಣಕುಮಾರ ಕೊಟ್ಟುರು, ಅನಿಲ್ ಜಡದೇರ್,ಪ್ರತೀಕ ಪಲ್ಲೇದ ಮತ್ತು ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...