ಗದಗ | ಕ್ರೀಡೆಗಳಿಂದ ಮಾನಸಿಕ-ದೈಹಿಕ ಸದೃಢತೆ ಸಾಧ್ಯ: ಡಿಸಿ ಶ್ರೀಧರ್

Date:

ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು‌ ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅಭಿಪ್ರಾಯಪಟ್ಟರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ(ಫುಟ್ಬಾಲ್ ಮತ್ತು ಹಾಕಿ)ವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿಯೂ ಜಿಲ್ಲೆಗೆ ಕೀರ್ತಿ ತರಬೇಕು” ಎಂದು ಆಶಿಸಿದರು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಮಾತನಾಡಿ, “ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಇಲ್ಲಿ ಆಗಮಿಸಿದ್ದಾರೆ. ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯ. ಕ್ರೀಡಾಪಟುಗಳು ನಿರ್ಣಾಯಕರ ನಿರ್ಣಯವನ್ನು ಪಾಲಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, “ಗದಗ ಜಿಲ್ಲೆಯ ಹಾಕಿ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಮಟ್ಟದಿಂದ ಈಗ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಗದಗ ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ಗದಗ | ‘ಕಲಾಸಿರಿ ಆದರ್ಶ ಶಿಕ್ಷಕಿ ಪ್ರಶಸ್ತಿ’ಗೆ ಶಿಕ್ಷಕಿ ಸುಸನ್ನಾ ಕನವಳ್ಳಿ ಆಯ್ಕೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಮಾತನಾಡಿ, “ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು (ಫುಟ್ಬಾಲ್ ಮತ್ತು ಹಾಕಿ) ಸೆಪ್ಟೆಂಬರ್ 11 ಮತ್ತು 12 ರಂದು ಜರುಗುತ್ತಿವೆ. ಫುಟ್ಬಾಲ್ ಕ್ರೀಡಾಕೂಟ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಹಾಕಿ ಕ್ರೀಡಾಕೂಟ ಗದಗ ಬೆಟಗೇರಿಯ ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಜರುಗುತ್ತಿವೆ” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಮೋಹನ ಕಟ್ಟಿಮನಿ, ಹನುಮಂತಪ್ಪ ವೀರಾಪೂರ, ಎಚ್.ಬಿ.ಗಡಟಾದ, ಸರ್ಫರಾಜ್ ಶೇಖ್, ಎಂ.ಎ.ಯರಗುಡಿ, ದೈಹಿಕ ಶಿಕ್ಷಕರುಗಳು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...