“ಕೆಲ ದಿನಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿ ಸಾವಿರ ದಿನಗಳನ್ನು ಯಶಸ್ವಿಯಾಗಿ ಪೂರೈಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ ಎಂದು ಅಧ್ಯಯನದ ವರದಿಗಳ ಮೂಲಕ ತಿಳಿದು ಬರುತ್ತದೆ. ಶಕ್ತಿ ಯೋಜನೆಯಡಿ ಆರು ನೂರು ಕೋಟಿಗೂ ಅಧಿಕ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ರಾಜ್ಯದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ”ಬೆಂದು ಸಂಪನ್ಮೂಲ ವ್ಯಕ್ತಿ ಮುತ್ತುರಾಜ್ ಹೇಳಿದರು.
ಗದಗ ನಗರದ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಸಾಕಷ್ಟು ಟೀಕೆಗಳ ನಡುವೆಯೂ ರಾಜ್ಯ ಸರಕಾರವು ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಎಲ್ಲ ಟೀಕೆಗಳಿಗೆ ಉತ್ತರ ದೊರಕಿದಂತಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
“ಗೃಹಲಕ್ಷ್ಮಿ ಯೋಜನೆಯಡಿ 1.28 ಕೋಟಿ ಮಹಿಳೆಯರಿಗೆ ಸಹಾಯವಾಗುವುದರ ಮೂಲಕ ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವ ಮೂಲಕ ಬಹುದೊಡ್ಡ ಬದಲಾವಣೆಯನ್ನು ನಾವು ಕಾಣಬಹುದಾಗಿದೆ” ಎಂದರು.
“ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದಾಗಿ ಪ್ರತಿ ಕುಟುಂಬಕ್ಕೆ ಪ್ರತಿ ಮಾಹೆ ಅಂದಾಜು ನಾಲ್ಕರಿಂದ ಐದು ಸಾವಿರ ರೂಪಾಯಿಗಳ ಉಳಿತಾಯವಾಗುತ್ತಿದ್ದು ಇದರಿಂದಾಗಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುವ ಮೂಲಕ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜ್ಯದ ತಲಾ ಆದಾಯದ ಹೆಚ್ಚಳದಿಂದಾಗಿ ಕೇಂದ್ರಕ್ಕೆ ರಾಜ್ಯದಿಂದ ಹೆಚ್ಚಿನ ತೆರಿಗೆಯನ್ನು ನೀಡಲಾಗುತ್ತಿದೆ. ರಾಜ್ಯದ ಅಂದಾಜು ಒಂದೂವರೆ ಕೋಟಿ ಜನ ಈ ಪಂಚಗ್ಯಾಂಟಿ ಯೋಜನೆಗಳ ಸದುಪಯೋಗಪಡೆದುಕೊಳ್ಳುತ್ತಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಅಕಬರಸಾಬ ಬಬರ್ಚಿ, ಉಪಾಧ್ಯಕ್ಷರು ನೀಲಮ್ಮ ಬೋಳನವರ, ದೀಪಕ ಜಿ ಲಮಾಣಿ, ಹೇಮಂತಗೌಡ ಪಾಟೀಲ, ಪಿ.ಬಿ.ಅಳಗವಾಡಿ, ಫಕ್ರುಸಾಬ ಚಿಕ್ಕಮಣ್ಣೂರ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಾದಿಕಾರದ ಅಧ್ಯಕ್ಷರು ಅಶೋಕ ಮಂದಾಲಿ, ಸಂಗನಗೌಡ ಪಾಟೀಲ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ನಾಗರಾಜ ಶಿವಪ್ಪ ಮಡಿವಾಳರ, ಶರಣಪ್ಪ ಬೆಟಗೇರಿ, ವೀರಯ್ಯ ಮಠಪತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾದಿಕಾರದ ಸದಸ್ಯರುಗಳಾದ ಪುಲಕೇಶಗೌಡ ಪಾಟೀಲ, ಈಶಣ್ಣ ಹುಣಸಿಕಟ್ಟಿ, ಶರೀಫ್ ಬೆಳೆಯಲಿ, ರಾಜೀವ ಗೊಡಚಪ್ಪ ಕುಂಬಿ, ಶಿವನಗೌಡ ಪಾಟೀಲ, ಆರ್.ಆರ್.ಗಡ್ಡದ್ದೇವರಮಠ, ಗೀತಾ ಬೀರಣ್ಣವರ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ ಜಗದೀಶ್, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಗಣ್ಯರು, ಮುಖಂಡರುಗಳು, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.





