ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ನಡೆದಿದೆ.
ಜನ್ನತ ಬೀ(45) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಡಗೋಳಿ ಗ್ರಾಮದ ರಸ್ತೆಯಲ್ಲಿ ನಾಯಿಗಳ ಜಗಳ ನಡೆದಿತ್ತು. ಆ ಸಂದರ್ಭದಲ್ಲಿ ಮಹಿಳೆ ನಡೆದುಕೊಂಡು ಮನೆಯಿಂದ ಅಂಗಡಿಗೆ ಹೊರಟಿದ್ದರು. ಜಗಳ ಮಾಡಿಕೊಂಡು ಬಂದ ಶ್ವಾನಗಳ ಗುಂಪು ಮಹಿಳೆಯ ಮೇಲೆ ಏಕಾ ಏಕಿ ದಾಳಿ ನಡೆಸಿವೆ. ಪರಿಣಾಮ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿದ್ದು, ಎಲ್ಲಂದರಲ್ಲಿ ನಾಯಿಗಳು ಕಚ್ಚಿವೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಗಾಂಜಾ ಮಾರಾಟ: ಹತ್ತು ಜನರ ಬಂಧನ
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ರೋಣ ತಾಲೂಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ರೋಣ ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.





