ಗದಗ | ಬೀದಿದನ ದಾಳಿ; ವೃದ್ಧ ಸಾವು

Date:

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಂಕ್ರಪ್ಪ ಹೋಳಿ(70) ಮೃತವ್ಯಕ್ತಿ.

“ವೃದ್ಧ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಏಕಾಏಕಿ ದಾಳಿಗೈದ ಬೀದಿದನದಿಂದ ಕೆಳಗೆ ಬಿದ್ದರು. ಇದನ್ನು ಕಂಡ ಸ್ಥಳೀಯರು ಕೂಡಲೇ 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಒಂದೂವರೆ ಘಂಟೆಯಾದರೂ ಆಂಬುಲೆನ್ಸ್ ಸ್ಥಳಕ್ಕೆ ಬಾರದೆ ಇರುವುದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಶಂಕ್ರಪ್ಪ ಹೋಳಿ(70) ಮೃತಪಟ್ಟರು” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಿಂದಾಗಿ ರೊಚ್ಚಿಗೆದ್ದ ಜನರು ಬೀದಿಗಳಿದು ಪ್ರತಿಭಟನೆ ನಡೆಸಿದ್ದರಲ್ಲದೆ, ನಗರಸಭೆ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಬೀದಿ ದನಗಳನ್ನು ಸ್ಥಳಾಂತರಿಸಬೇಕು. ಬೀದಿ ದನದ ದಾಳಿಗೆ ಬಲಿಯಾದ ವೃದ್ಧನ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಪ್ರವಾಹದಲ್ಲಿ ಕೊಚ್ಚಿ ಹೋದ ರೈತರ ಬದುಕು; ಬೇಕಿದೆ ಬೆಳೆ ಪರಿಹಾರ

ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, “ನಾಳೆಯಿಂದ ಮೈಕ್ ಅನೌನ್ಸ್ ಮಾಡಿ ದನಗಳ ಮಾಲೀಕರಿಗೆ, ದೇವಸ್ಥಾನದ ದನಗಳು, ಬಿಡಾಡಿ ದನಗಳು ಈ ಮೂರು ತರಹದ ದನಗಳ ಮಾಲೀಕರಿಗೆ ನೋಟಿಸ್‌ ನೀಡುತ್ತೇವೆ. ಇದಕ್ಕೆ ಕಡಿವಾಣ ಹಾಕುತ್ತೇವೆ” ಎಂದು ಹೇಳಿದರು. ಬಳಿಕ ಪ್ರತಿಭಟನಾಕಾರರು ಧರಣಿಯನ್ನು ಹಿಂಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...