ಗದಗ | ಉದ್ಯೋಗ ಖಾತ್ರಿಪಡಿಸಲು ಜುಲೈ 9ರಂದು ಮುಷ್ಕರ: ಬಾಲು ರಾಠೋಡ ಕರೆ

Date:

“ರೈತ ಕಾರ್ಮಿಕರ, ಕೂಲಿಕಾರರ ಜನ ವಿರೋಧಿ ಕೇಂದ್ರ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಇದೆ ಜಜುಲೈ 9ರಂದು ಎಲ್ಲಾ  ತಾಲೂಕು ಜಿಲ್ಲೆಯಲ್ಲಿ  ಸಾರ್ವತ್ರಿಕ ಮುಷ್ಕರಕ್ಕೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ ಕರೆ ನೀಡಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಸೂಡಿ ಗ್ರಾಮ ಪಂಚಾಯಿತಿ ಎದುರು ಉದ್ಯೋಗ ಖಾತ್ರಿ ಅಡಿಯಲ್ಲಿ ಉದ್ಯೋಗ ಕೊಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲೂಕ ಸಮಿತಿ ಪ್ರತಿಭಟನೆ ನಡೆಸಿ ಪಿಡಿಒ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಹನ್ನೊಂದು ವರ್ಷಗಳು ಕಳೆದಿವೆ. ದ್ಯೋಗ ಖಾತ್ರಿ ಯೋಜನೆಯು ವರ್ಷದಿಂದ ವರ್ಷಕ್ಕೆ ಹಣಕಾಸು ಕಡಿತ ಮಾಡುತ್ತಾ ಬರುತ್ತಿದೆ. ಈ ಮಹತ್ವದ ಯೋಜನೆಯನ್ನು ನಾಶ ಮಾಡುವ ಉದ್ದೇಶ ಹೊಂದಿದೆ. ಈ ವರ್ಷದ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚುವರಿ ಹಣ ಕಡಿತ ಮಾಡಿದೆ. ‘ಜನತೆಗೆ ಉದ್ಯೋಗ ಸೃಷ್ಟಿಸಲಾಗಿದೆ’ ಎಂದು ಸುಳ್ಳು ಹೇಳುವ ಚಾಳಿ ಮುಂದುವರೆಸಿದೆ. ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರದಿಂದಲ್ಲೂ ಸರಿಯಾದ ರೀತಿಯಲ್ಲಿ ಕೂಲಿಕಾರರಿಗೆ ಕೆಲಸ ನೀಡಲು ಇಚ್ಚಾಸಕ್ತಿ ಕಡಿಮೆ ಆಗಿದೆ . ಶಾಸಕರು ಜಿ. ಎಸ್. ಪಾಟೀಲರು ತಮ್ಮದೇ ಆಡಳಿತ ಹೊಂದಿರುವ ಗ್ರಾಮ ಪಂಚಾಂಗಗಳಲ್ಲಿ ನೂರು ಮಾನವ ದಿನಗಳ ಕೆಲಸವನ್ನು ಕೂಲಿಕಾರರಿಗೆ ಕೊಡಿಸಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸುವ ಮಾತುಗಳನ್ನು ಆಡದೆ ಭ್ರಷ್ಟಾಚಾರದಲ್ಲಿ ತೋಡಗಿರುವದು ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ ಬಾರಕೇರ ಮಾತನಾಡಿ “ನಮ್ಮ ಸೂಡಿ ಪಂಚಾಯಿತಿಯಲ್ಲಿ ಮೂರು ವರ್ಷಗಳ ಹಿಂದೆ ಕೆಲಸ ಕೊಡದಿದ್ದಾಗ ಕೂಲಿಕಾರರ ಸಂಘದಿಂದ ಹೋರಾಟ ಮಾಡಿ ಕೆಲಸ ಪಡೆದುಕೊಂಡಿದ್ದೆವೆ. ಆದರೆ ಈ ವರ್ಷ ಯಾವುದೇ ರೀತಿಯ ಕೆಲಸ ಕೊಡದೆ ಬ್ರಷ್ಟಾಚಾರದಲ್ಲಿ ಪಂಚಾಯಿತಿ ಮುಳುಗಿದೆ. ಹಾಗಾಗಿ ನಾವು ಮತ್ತೆ ಹೋರಾಟದ ಮೂಲಕವೇ ಕೆಲಸವನ್ನು ಪಡೆದು ಆಡಳಿತದ ಭ್ರಷ್ಟಾಚಾರ ಬಯಲಿಗೆ ತರುತ್ತೆವೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ

ಪಿ ಡಿ ಓ ಅಧಿಕಾರಿಗಳು ಮನವಿ ಸ್ವೀಕರಿಸಿ, “ನಿಮ್ಮ ಕೂಲಿ ಕೆಲಸದ ಬಗ್ಗೆ ಎಂಟು ದಿನಗಳಲ್ಲಿ ಕೂಲಿಕಾರರ ವಿಶೇಷ ಸಭೆ ಕರೆದು ಸಮಸ್ಯೆಗಳನ್ನು ಚರ್ಚಿಸಿ  ಕೆಲಸವನ್ನು ಕೋಡುತ್ತೆವೆ” ಎಂದರು.

ಈ ಪ್ರತಿಭಟನೆಯಲ್ಲಿ ಪರಸುರಾಮ ಕೋಟಿ, ಮಂಜುನಾಥ ಆಲೂರ, ಗೀತಾ ರಾಠೋಡ, ಮಮತಾ ನಧಾಪ, ಬೀಬಿಜಾನ ನಧಾಪ, ಶರಣಮ್ಮ, ನಾಗರಾಜ್ ಬಾರಕೇರ, ಲಿಂಗರಾಜ ಕುಂಬಾರ, ಶ್ರೀಧರ ಸೋಬಾನದ, ಬಸವರಾಜ ಎ ಬಾರಕೇರ, ಬಸು ಹಾದಿಮನಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...