ಗದಗ | ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ: ಬಸವರಾಜ್ ಸೂಳಿಬಾವಿ

Date:

“ಗದಗ ಜಿಲ್ಲೆ ಜೀವನಾಡಿ, ಇಡೀ ಉತ್ತರ ಕರ್ನಾಟಕದ ಸಹ್ಯಾದ್ರಿ, ಏಷ್ಯಾದಲ್ಲಿಯೇ ಅತ್ಯುತ್ತಮ ಹವಾಮಾನ, ಶುದ್ಧಗಾಳಿ ಇರುವ ಎರಡು ಜಿಲ್ಲೆಗಳಲ್ಲಿ ಗದಗ ಜಿಲ್ಲೆಯೂ ಒಂದು. ಇದಕ್ಕೆ ಕಾರಣ ಆಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ ಮಾಡುತ್ತೇವೆ” ಎಂದು ಸಾಮಾಜಿಕ ಕಾರ್ಯಕರ್ತ, ಸಾಹಿತಿ ಬಸವರಾಜ್ ಸೂಳಿಬಾವಿ ಎಚ್ಚರಿಕೆ ನೀಡಿದ್ದಾರೆ.

ಗದಗ ಪಟ್ಟಣದ ಪತ್ರಿಕಾ ಭವನದಲ್ಲಿ ಉತ್ತರ ಕರ್ನಾಟಕದ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ ಕರ್ನಾಟಕ ಸರಕಾರ ಮತ್ತೆ ಗಣಿಗಾರಿಕೆಗೆ ಅನುಮತಿ ನೀಡುವುದನ್ನು ಖಂಡಿಸಿ ಮಾತನಾಡಿದರು.

“ಬಯಲುಸೀಮೆಯ ಜೀವಾಳ ಕಪ್ಪತಗುಡ್ಡ ಕೇವಲ ಸಸ್ಯಕಾಶಿ ಅಷ್ಟೇ ಅಲ್ಲ. ಇಲ್ಲಿರುವ ಮಳೆಬೆಳೆಗೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಕಪ್ಪತಗುಡ್ಡದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ದೃಷ್ಟಿ ಬೀರಿದ್ದು, ಯಾವುದೋ ಒಂದು ಕಾಲ ಆಗಿತ್ತು. ಈಗಲೂ ಪ್ರಯತ್ನಗಳು ನಡೆದಿವೆ. ಈ ದೇಶದ ಕಂಪನಿಗಳಷ್ಟೇ ಮಾತ್ರವಲ್ಲ, ವಿದೇಶೀ ಕಂಪನಿಗಳು ಈ ನೆಲೆದ ಮೇಲೆ ಕಣ್ಣು ಹಾಕಿದ್ದವು ಎಂಬುದು ಗೊತ್ತಿರುವ ಸಂಗತಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241018 WA0017 1

“2011ರಲ್ಲಿ ಪೋಸ್ಕೊ ಕಂಪನಿ ಈ ನೆಲಕ್ಕೆ ಬರುವ ಹಿನ್ನಲೆಯಲ್ಲಿ ಕರ್ನಾಟಕದ ಆಗಿನ ಸರಕಾರದ ಜೊತೆಗೆ ಎಮ್ ಒ ಎಮ್ ಮಾಡಿಕೊಂಡಿದ್ದು, ಇದನ್ನು ರದ್ದು ಮಾಡಬೇಕೆಂದು ದೊಡ್ಡ ಮಟ್ಟದಲ್ಲಿ ಗದಗ ನೆಲದಲ್ಲಿ ಹೋರಾಟ ನಡೆದಿತ್ತು. ಆಗ ಪೋಸ್ಕೊ ಇಲ್ಲಿಂದ ಹೋಯಿತು. ನಂತರದಲ್ಲಿ ಕಪ್ಪತ್ತಗುಡ್ಡದ ಮೇಲೆ ಕಣ್ಣಿಟ್ಟಿದ್ದ ಜಿಂದಾಲ್‌ನಂತ ಬೇರೆ ಬೇರೆ ಕಂಪನಿಗಳು ಗಣಿಗಾರಿಕೆ ಮಾಡಲು ಒಳಗಿಂದ ಒಳಗೆ ದೊಡ್ಡ ಪ್ರಯತ್ನ ಮಾಡುತ್ತಿದ್ದವು. ಕರ್ನಾಟಕ ಸರಕಾರ 2017ರಲ್ಲಿ ಈ ಪ್ರದೇಶವನ್ನು ಸಂರಕ್ಷಣಾ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಿತು. 2019ರಲ್ಲಿ ಮರು ಮಾರ್ಪಡು ಮಾಡಿ, ಈ ಪ್ರದೇಶವನ್ನು ವನ್ಯಜೀವಿಗಳ ಧಾಮ ಎಂದು ಘೋಷಿಸಿತು. ಅಷ್ಟೇ ಅಲ್ಲದೇ, ಕಪ್ಪತಗುಡ್ಡದ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ಕಲ್ಲು, ಮಣ್ಣು ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂಬ ಆದೇಶವನ್ನು ಸರಕಾರ ಹೊರಡಿಸಿತ್ತು. ಈ ಆದೇಶವನ್ನು ಬೇರೆ ಬೇರೆ ಕಂಪನಿಗಳು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದವು. ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತಿತ್ತು” ಎಂದು ನೆನಪಿಸಿಕೊಂಡರು.

ಆದರೆ, ಈಗ ಕಪ್ಪತಗುಡ್ಡದ ಗಣಿಗಾರಿಕೆ ಮಾಡಲು ಅನುಮತಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ವನ್ಯಜೀವಿಗಳ ಮಂಡಳಿಗೆ 28 ಪ್ರಸ್ತಾವಳಿ ಬಂದಿವೆ. ಮುಖ್ಯಮಂತ್ರಿಯವರು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳದೆ ಮುಂದೂಡಿದರು. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿರದ ಸಂಗತಿಯೇನಲ್ಲ. ಸಿದ್ದರಾಮಯ್ಯನವರು 2011ರಲ್ಲಿ ಪೋಸ್ಕೊ ಹೋರಾಟದಲ್ಲಿ ಇಲ್ಲಿಗೆ ಭೇಟಿ ಕೊಟ್ಟು ಬೆಂಬಲಿಸಿದವರು, ಈ ವನ್ಯಜೀವಿ ಮಂಡಳಿಗೆ ಬಂದಿರುವ ಪ್ರಸ್ತಾವನೆಗಳನ್ನ ನೇರವಾಗಿ ತಿರಸ್ಕಾರ ಮಾಡಬೇಕಿತ್ತು. ಮುಂದೂಡುವ ಅಗತ್ಯವಿರಲಿಲ್ಲ. ಯಾಕೆಂದರೆ ವನ್ಯಜೀವಿ ಸಂರಕ್ಷಣಾ ಪ್ರದೇಶದ ಮೇಲೆ ಪರಿಣಾಮ ಆಗುತ್ತಿವೆ. ಒಂದು ವೇಳೆ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ ಮಾಡುತ್ತೇವೆ ಎಂದು ಬಸವರಾಜ್ ಸೂಳಿಬಾವಿ ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕನ್ನಡಹಬ್ಬ ಸಂಭ್ರಮ: ಅಕ್ಷರ ಜಾತ್ರೆಗೆ ಕವನ, ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪತ್ರಿಕಾಗೋಷ್ಠಿಯಲ್ಲಿ ಹೋರಾಟಗಾರರಾದ ಶರೀಫ್ ಬಿಳಿಯಲಿ,  ಮುತ್ತು ಬಿಳಿಯಲಿ, ಸಾಹಿತಿ ಜೆ ಬಿ ಪಾಟೀಲ್, ಕನ್ನಡ ಪರ ಹೋರಾಟಗಾರ ಚಂದ್ರಕಾಂತ ಚವ್ಹಾಣ, ಡಿಎಸ್‌ಎಸ್ ಮುಖಂಡರಾದ ಬಾಲರಾಜ್ ಅರಬರ್, ನಾಗರಾಜ್ ಗೋಕಾವಿ, ಲಿಂಗಾಯತ ಪ್ರಗತಿಶೀಲ ಶೇಖಣ್ಣ ಕವಳಿಕಾಯಿ, ಆನಂದ ಶಿಂಗಾಡಿ, ಅನಿಲ್ ಕಾಳೆ, ಪರಸು ಕಾಳೆ, ಬಸವರಾಜ್ ಬಿಳಿಯಲಿ, ಕಾಶೀನಾಥ್ ಬಗಲಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...