ಗದಗ | ಸಮಯಕ್ಕೆ ಸರಿಯಾಗಿ ಬಾರದ ಬಸ್: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Date:

ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ಹೋಗಲು ಸಾರಿಗೆ ಬಸ್ ಬರುತ್ತಿಲ್ಲ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗಜೆಂದ್ರಗಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರಕಾರದ ವಿರುದ್ದ ಘೋಷಣೆ ಕೂಗಿದರು.

“ಸಾಕಷ್ಟು ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ.ಕಾಲೇಜಿಗೆ ತಡವಾಗಿ ಹೋಗುತ್ತಿದ್ದೇವೆ . ಕ್ಲಾಸುಗಳು ತಪ್ಪುತ್ತಿವೆ.  ಬಸ್ಸುಗಳನ್ನು ಬೀಡುವಂತೆ ಸಾಕಷ್ಟು ಮನವಿ ಮಾಡಿದರೂ, ಯಾವುದೇ ರೀತಿಯ ಕ್ರಮ ತಗೊಂಡಿಲ್ಲ. ಇದರಿಂದ ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಸರಿಯಾದ ಸಮಯಕ್ಕೆ ಬಸ್ಸುಗಳನ್ನು ಬಿಡುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ” ಎಂದು ವಿದ್ಯಾರ್ಥಿಗಳು  ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ? ಹಾವೇರಿ | ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ…

ಸ್ಥಳಕ್ಕೆ ಆಗಮಿಸಿದ ಗಜೇಂದ್ರಗಡ ಕೆಎಸ್‌ಆರ್‌ಟಿಸಿ ಘಟಕದ ಮಾನ್ಯೇಜರ್, ಸರಿಯಾದ ಸಮಯಕ್ಕೆ ಇನ್ನೂ ಮುಂದೆ ಬಸ್ಸಗಳನ್ನು ಬಿಡಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ಕೊಟ್ಟ ಮೇಲೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ವರದಿ: ಮಂಜುನಾಥ ಬುರಡಿ, ಮೀಡಿಯಾ ವಾಲಂಟಿಯರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...