ಗದಗ | ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Date:

ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ–ಬಾಲಕಿಯರ ಬೆಳಗಾವಿ ವಿಭಾಗಮಟ್ಟದ ಬಾಲ್ ಬಾಡ್ಮಿಂಟನ್ ಟೂರ್ನಿ ಹಾಗೂ ಗದಗ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

‘ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ಸೋಲೇ ಗೆಲುವಿನ ಮೆಟ್ಟಿಲು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದು ಅವಶ್ಯ. ಇದರಿಂದ ತಂಡಗಳೊಂದಿಗೆ ಸಮನ್ವಯತೆ, ಹೊಂದಿಕೊಳ್ಳುವ ಸ್ವಭಾವ ಬೆಳೆಯುತ್ತದೆ. ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ, ಕ್ರೀಡಾಕೂಟ ಯಶಸ್ವಿಗೊಳಿಸಬೇಕು’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಎ. ಹವಳದ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮಹೇಶ ಕುರಿಯವರ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಬಿ.ಕೊಣ್ಣೂರ,  ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಗದಗ ಗ್ರಾಮೀಣ ಅಧ್ಯಕ್ಷ ಪವಾರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಕಾರ್ಯದರ್ಶಿ ಎನ್.ಎಸ್.ಪಾಟೀಲ ಇದ್ದರು.

ಇದನ್ನು ಓದಿದೀರಾ: ಕುಮಾರಸ್ವಾಮಿ ಆರೋಪ ಮಾಡೋದು ಬಿಟ್ಟು ಚುನಾವಣೆ ಎದುರಿಸಲಿ: ಡಿ.ಕೆ ಸುರೇಶ್

ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಕ್ಷೇತ್ರ ಸಮನ್ವಯಾಧಿಕಾರಿಗಳು ಸೇರಿದಂತೆ 9 ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...