ಗದಗ | ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಗದಗ ಪಟ್ಟಣದಲ್ಲಿ ನಿನ್ನೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ನಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದೆ. ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಿದ್ದಾರೆ” ಎಂದರು.

ಸಮೀಕ್ಷೆಗೆ ಯಾರ ವಿರೋಧವೂ ಇಲ್ಲ : “ಜಾತಿಗಣತಿಯ ಹಿಂದೆ ಷಡ್ಯಂತ್ರವಿದೆ’ ಎಂದು ವಚನಾನಂದ ಸ್ವಾಮೀಜಿಗಳು ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವೂ ಜಾತಿಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ  ಷಡ್ಯಂತ್ರವಿರಲಿದೆಯೇ?  ಸಮೀಕ್ಷೆಗೆ ಯಾವುದೇ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಸಮಾಜದಲ್ಲಿ ಸಮಾನತೆ ತರಲು ಬಡವರಿಗೆ ಸರ್ಕಾರಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ- ಬಿಜೆಪಿ ರಾಜಕೀಯ ಮಾಡುತ್ತಿದೆ : ಸಮೀಕ್ಷೆಯ ನಿರ್ಧಾರವನನ್ನು ಮರುಪರಿಶೀಲಿಸಲು ಮಾನ್ಯ ರಾಜ್ಯಪಾಲರು ಸೂಚನೆ ನೀಡುವಂತೆ ಬಿಜೆಪಿಯವರು ಮನವಿ ಸಲ್ಲಿಸಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯ ವಿಚಾರದಲ್ಲಿ ಬಿಜೆಪಿಯು ರಾಜಕೀಯ ಮಾಡುತ್ತಿದೆ. ಸಮೀಕ್ಷೆಯ ವಿಚಾರದಲ್ಲಿ ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ : “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನದ ಬಗ್ಗೆ ಮಾಡಿರುವ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರು ಅಳಂದ ಕ್ಷೇತ್ರದಲ್ಲಿ ಸುಮಾರು 6000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಉಲ್ಲೇಖಿಸಿದ್ದು, ಇದು ಸತ್ಯವಾಗಿದೆ. ಆಳಂದದಲ್ಲಿರುವ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ ನಡೆಯಲಿದೆ” ಎಂದರು.

ಕೇಂದ್ರ ಸರ್ಕಾರದ್ದೇ ಅಂತಿಮ ನಿರ್ಧಾರ : “ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಬಗ್ಗೆ ಪ್ರತಿಕ್ರಯಿಸಿ, ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಶಿಫಾರಸ್ಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಸರ್ಕಾರ ವಾಪಸ್ಸು ಕಳಿಸಿದ್ದು, ಅದಕ್ಕೆ ವಿವರಣೆಯನ್ನು ಸರ್ಕಾರ ನೀಡಲಿದೆ. ಯಾವುದೇ ಸಮುದಾಯವನ್ನು  ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳುತ್ತದೆ” ಎಂದರು.

ಜಂಟಿ ಸಮೀಕ್ಷೆ- ವರದಿ ನಂತರ ಬೆಳೆಪರಿಹಾರ : “ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆಹಾನಿ ಸಂಭವಿಸಿರುವ ಬಗ್ಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಜಂಟಿಸಮೀಕ್ಷೆಯ ಪೂರ್ಣಗೊಳ್ಳಲಿದೆ” ಎಂದರು.

ರಸ್ತೆ ದುರಸ್ತಿಗೆ ಕ್ರಮ : ರಸ್ತೆಗುಂಡಿಗಳ ಬಗ್ಗೆ ಬಿಜೆಪಿಯವರು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, “ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿರುವ ಕಾರಣ, ರಸ್ತೆಗಳು ಹಾಳಾಗಿರುವುದು ನಿಜ. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಭೆ ನಡೆಸಿ , ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ಬಿಜೆಪಿಯ  ಅಧಿಕಾರಾವಧಿಯಲ್ಲಿ ಒಂದೂ ರಸ್ತೆಯನ್ನೂ ನಿರ್ಮಿಸಿಲ್ಲ ಹಾಗೂ ರಸ್ತೆಗುಂಡಿಯನ್ನೂ ಮುಚ್ಚಿರುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...