ಗದಗ | ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ಪ್ರಕರಣ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ, 36.87 ಲಕ್ಷ ದಂಡ

Date:

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

ನಿರ್ಗತಿಕ ವೃದ್ಧಾಶ್ರಮಕ್ಕೆ ನೆರಳಾದ ಪೊಲೀಸರು: ಖಾಕಿ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ!
ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12.72 ಲಕ್ಷ ರೂಪಾಯಿ ನೀಡಲು ನ್ಯಾಯಾಲಯ ಸೂಚನೆ ನೀಡಿದೆ. ದೊಂಬಿ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿ ಮಾಡಲು ನ್ಯಾಯಾಲಯ ಆದೇಶಿಸಿದೆ.

ವರ್ಷಗಳ ಹಿಂದೆ ಅಂದರೆ 2017 ಫೆಬ್ರವರಿ 5 ರಂದು ಅಕ್ರಮ ಮರಳು ಸಾಗಿಸುವ ವಾಹನವನ್ನು ಪೊಲೀಸರು ತಡೆದಿದ್ದರು. ಈ ವಾಹನ ಚಲಾಯಿಸುತ್ತಿದ್ದ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿ ಶಿವಪ್ಪ ಡೋಣಿ ಎಂಬುವರಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ, ಶಿವಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಶಿವಪ್ಪ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

ಇದರಿಂದ ಆಕ್ರೋಶಗೊಂಡಿದ್ದ ಶಿವಪ್ಪ ಅವರ ಪೋಷಕರು ಮತ್ತು ಗ್ರಾಮಸ್ಥರು ಮೃತದೇಹವನ್ನು ಪೊಲೀಸ್ ಠಾಣೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದರು. ನೋಡ ನೋಡುತ್ತಿದ್ದಂತೆ ಶಾಂತಯುತವಾಗಿ ನಡೆದಿದ್ದ ಪ್ರತಿಭಟನೆ, ವಿಕೋಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆಯೊಳಗೆ ನುಗ್ಗಿ, ಕಚೇರಿಯಲ್ಲಿದ್ದ ಕಡತಗಳು, ದಾಖಲೆಗಳು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...