ಗದಗ‌ | ಜಿಲ್ಲಾಧಿಕಾರಿ ಜನಸ್ಪಂದನ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆದಿವೆ; ಜನರ ಅಸಮಾಧಾನ

Date:

ರೋಣ ತಾಲೂಕಿನ ಎಲ್ಲ ಜನರ ಅಹವಾಲುಗಳನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ. ಇಲ್ಲಿಯೇ ಬಗೆಹರಿಸುವಂತಹ ಅಹವಾಲುಗಳನ್ನು ಬಗೆಹರಿಸುತ್ತೇವೆ ಅಥವಾ ಸ್ಥಳದಲ್ಲಿ ಬಗೆಹರಿಯದಂತಹ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವು‌ದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಹೇಳಿದರು.

ಗದಗ ಜಿಲ್ಲೆಯ ರೋಣ ಪಟ್ಟಣದ ಗುರುಬಸವ ಭವನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಗಳೂರು ಗ್ರಾಮಸ್ಥರಿಂದ ಟಿ ಸಿ ಬದಲಾವಣೆ ಮಾಡುವ ಕುರಿತು ಮನವಿ ಸಲ್ಲಿಸಿದರು. ಭೋವಿ ಸಮಾಜದ ಜಾತಿ ಪ್ರಮಾಣಪತ್ರ ವಿತರಣೆ ಮಾಡುವಂತೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊನ್ನಾಪುರ ಗ್ರಾಮಕ್ಕೆ ಯಾವುದೇ ರೀತಿಯ ಸಾರಿಗೆ ಸೌಲಭ್ಯ ಇರುವುದಿಲ್ಲ. ವಿದ್ಯಾರ್ಥಿಗಳು, ಜನರು ಪಟ್ಟಣಗಳಿಗೆ ಹೋಗಲು ನಾಲ್ಕು ಕಿಲೋ ಮೀಟರ್ ನಡೆದುಕೊಂಡೇ ಹೋಗಬೇಕು ಎಂದು ಹೇಳಿದರು. ಹನಮಂತಪ್ಪ ಬಿಂಗಿ ಸುರೇಶ್ ಮಹದೇವಪ್ಪ ಶಿವಶೀಂಪಿ ಬೆಳವಣಿಕೆ ಗ್ರಾಮದವರಾಗಿದ್ದು, ಅಂಗವಿಕಲರು, ನಂಗೆ ಯಾವುದೇ ರೀತಿಯಲ್ಲಿ ಮನೆ ಇರುವುದಿಲ್ಲ, ಜಾಗ ಇದೆ, ಆಶ್ರಯ ಮನೆ ಒದಗಿಸಬೇಕು ಎಂದು ಕೇಳಿಕೊಂಡರು.

ಡಿಎಸ್ಎಸ್ ಸಂಘಟನೆಯ ಮುಖಂಡರು ಪ್ರತಿಯೊಂದು ತಾಲೂಕುಗಳಲ್ಲಿ ಅಂಬೇಡ್ಕರ್ ಭವನಗಳು ಇವೆ. ನಮ್ಮ ರೋಣದಲ್ಲಿ ಅಂಬೇಡ್ಕರ್ ಭವನ ಇರುವುದಿಲ್ಲ. ತಳ ಸಮುದಾಯಗಳನ್ನು, ಅಂಬೇಡ್ಕರ್ ಅವರನ್ನು ಕಡೆಗಣಿಸುತ್ತಿದ್ದೀರಿ, ಕೂಡಲೇ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದರು.‌

ರೈತರಿಗೆ ಕೇವಲ ಹದಿನೈದು ರಷ್ಟು ಬೆಳೆ ಪರಿಹಾರ ಬಂದಿದೆ. ಇನ್ನೂ ಎಂಬತ್ತೈದರಷ್ಟು ಬೆಳೆ ಪರಿಹಾರ ಬಂದಿಲ್ಲ. ಕೂಡಲೇ ಬಿಡುಗಡೆ ಮಾಡಬೇಕೆಂದು ಸುಭಾಷ್ ದಾನರೆಡ್ಡಿ ಅವರು ಹೇಳಿದರು.

ಸವಡಿ ಗ್ರಾಮದ ರೈತ ಮುಖಂಡ ಮೇಘರಾಜ ಬಾವಿ ವಿಂಡ್ ಪವರ್‌ಗಳನ್ನು ಬಂಜರು ಭೂಮಿಯಲ್ಲಿ ಅಳವಡಿಸಲು ಅವಕಾಶವಿದೆ. ನಮ್ಮ ಇಡೀ ತಾಲೂಕುಗಳು ಫಲವತ್ತಾದ ಭೂಮಿಗಳನ್ನು ಹೊಂದಿವೆ. ಫಲವತ್ತಾದ ಭೂಮಿಗಳಲ್ಲಿ ವಿಂಡ್ ಫ್ಯಾನ್‌ಗಳನ್ನು ಹಾಕುವುದರಿಂದ ರೈತರ ಬೆಳೆ ಸರಿಯಾಗಿ ಇಳುವರಿ ಬರುವುದಿಲ್ಲ, ರೈತನ ಆದಾಯಕ್ಕೆ ಹೊಡೆತ ಬೀಳುತ್ತದೆ. ರೈತರ ಹೊಲಗಳಲ್ಲಿ ವಿಂಡ್ ಪವರ್ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಬಹುತೇಕ ಜಿಲ್ಲಾಧಿಕಾರಿಗಳು ಕೇವಲ ಕಾಟಾಚಾರಕ್ಕೆ ಜನಸ್ಪಂದನ ಕಾರ್ಯಕ್ರಮ ಮಾಡಿದರು. ಕೇವಲ ಒಂದೂವರೆ ಗಂಟೆ ಮಾತ್ರ ಎದ್ದು, ಯಾವುದೇ ರೀತಿಯಲ್ಲಿ ಜನರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಿಲ್ಲ” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮನಸು ಮತ್ತು ದೇಹವನ್ನು ಸಂಪರ್ಕಿಸುವುದೇ ಯೋಗ: ಡಾ ಮಕಾಂದರ

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನ್ಯಾಮಗೌಡ, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಅಹವಾಲು ಸಲ್ಲಿಸಲು ಬೇರೆ ಬೇರೆ ಹಳ್ಳಿಗಳಿಂದ ಬಂದಿದ್ದ ಜನರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...