ಗದಗ | ಭಗತ್‌ ಸಿಂಗ್‌ ಆದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಚಂದ್ರು ರಾಠೋಡ

Date:

ಕ್ರಾಂತಿಯ ಕಿಡಿಯಾಗಿ, ಇಡೀ ಭಾರತ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋರಾಟದ ಆದರ್ಶ ವ್ಯಕ್ತಿಯಾಗಿ ಭಗತ್ ಸಿಂಗ್ ಸ್ಪೂರ್ತಿಯಾಗುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಜಿಸಿದರು. ಇಂದಿನ ಯುವ ಪೀಳಿಗೆ ಭಗತ್ ಸಿಂಗ್ ಅವರ ಆದರ್ಶಗಳನ್ನು ಮೈಗೋಡಿಸಿಕೊಳ್ಳಬೇಕು ಎಂದು ಎಸ್ಎಫ್ಐ ಗದಗ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಹೇಳಿದರು.

ಗಜೇಂದ್ರಗಡ ನಗರದ ಅಲ್ಪಸಂಖ್ಯಾತರ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಕಾಮ್ರೇಡ್ ಭಗತ್ ಸಿಂಗ್ ಅವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭಾರತದ ಸ್ವಾತಂತ್ರ್ಯ ಚಳವಳಿಗೆ ಯುವ ಪಡೆಯನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಗತ್ ಸಿಂಗ್ ಇಂದಿನ ಅವ್ಯವಸ್ಥೆ, ಅನ್ಯಾಯದ ವಿರುದ್ಧವಾಗಿ ಸ್ಫೂರ್ತಿಯಾಗಬೇಕಿದೆ. ವಿದ್ಯಾರ್ಥಿ-ಯುವಜನರು ಆಲೋಚನೆ ಮಾಡಬೇಕಿದೆ. ಆದರೆ ಪ್ರಸ್ತುತ ದಿನಮಾನಗಳಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇದನ್ನು ವಿರೋಧಿಸುವ ನಿಟ್ಟಿನಲ್ಲಿ ನಾವುಗಳು ಕೆಲಸ ಮಾಡಬೇಕಾಗಿದೆ” ಎಂದು ಹೇಳಿದರು.

ನಂತರ ತಾಲೂಕಾಧ್ಯಕ್ಷ ಅನಿಲ್ ಆರ್ ಮಾತನಾಡಿ, “ಭಗತ್‌ ಸಿಂಗ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಅಷ್ಟೆ ಅಲ್ಲದೆ ಭವಿಷ್ಯದಲ್ಲಿ ಭಾರತ ಹೇಗಿರಬೇಕೆಂದು ಕನಸು ಕಂಡವರು. ಜಾತಿ ತಾರತಮ್ಯ ನೀತಿಗಳು ಹೋಗಬೇಕು, ಧರ್ಮದ ಹೆಸರಲ್ಲಿ ಒಡೆದಾಳುವರು, ಸಾಮ್ರಾಜ್ಯ ಶಾಹಿಗಳನ್ನು ದೇಶ ಬಿಟ್ಟು ಓಡಿಸಬೇಕು ಎಂದು ಹೇಳುತ್ತಿದ್ದರು. ಅಸ್ಪೃಷ್ಯತೆ ಬಗ್ಗೆ ಭಗತ್ ಸಿಂಗ್ ತನ್ನ 16ನೇ ವಯಸ್ಸಿನಲ್ಲಿಯೇ ಲೇಖನವನ್ನು ಬರೆದಿದ್ದರು. ಭಗತ್ ಸಿಂಗ್ ಬಯಸಿದ್ದ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗದಗ | ಧಾರ್ಮಿಕ ಸಾಮರಸ್ಯದ ಬದುಕಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ: ಪ್ರೊ ಎಸ್. ಯು. ಸಜ್ಜನಶೆಟ್ಟರ್

ಕಾರ್ಯಕ್ರಮದಲ್ಲಿ ಎಸ್ ಎಫ್ ಐ ಮುಖಂಡರಾದ ಅಭಿಲಾಷ್ ರಾಠೋಡ, ಗುರುಕಿರಣ್‌, ರಾಹುಲ್ ಯಮನೂರ ಸಾಬ್, ಪ್ರಶಾಂತ್, ದರ್ಶನ್, ಭೀಮೇಶ್, ಮುತ್ತುರಾಜ, ಆಕಾಶ, ಸಾಧಿಕ್, ರಾಕೇಶ್, ಮೈಲಾರಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...