ಗದಗ | ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

Date:

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.

ಆರೋಪಿ ಬಗರ್ ಅಲಿ ಇರಾನಿ (27) ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆಗ ಗುಂಡಿನ ದಾಳಿ ನಡೆಸಿದಾಗ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.

ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸಿಪಿಐ ಧೀರಜ್ ಸಿಂಧೆ ಗುಂಡಿನ ದಾಳಿ ನಡೆದಿದ್ದು, ಆರೋಪಿ ಬಗರ್ ಅಲಿ ಕಾಲಿಗೆ ಗಾಯವಾಗಿದೆ. ಸದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಬಡಾವಣೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಹನುಮಂತ್‌ ಓಲೇಕಾರ್, ಅಶೋಕ್ ಗಡದ್ ಹಲ್ಲೆಗೊಳಲಾಗಿದ್ದಾರೆ. ಈ ಇಬ್ಬರೂ ಪೊಲೀಸರಿಗೂ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಜೂನ್ 28ರಂದು ನಗರದ ಹೆಲ್ತ್ ಕ್ಯಾಂಪ್ ಬಳಿ ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಆರೋಪಿಗಳ ಗುಂಪೊಂದು ಹಲ್ಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ಮೇಲೆ ನಡೆದ ಹಲ್ಲೆ ಕೇಸಿನಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.

ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಗದಗನಿಂದ ಆರೋಪಿ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೆಪ್ ಆಗಿದ್ದನು. ಹಲ್ಲೆ ಬಳಿಕ ಆರೋಪಿ ಸ್ಕೂಟಿಯಲ್ಲಿ ಹೊ ಳೆಆಲೂರ ಗ್ರಾಮಕ್ಕೆ ಹೋಗಿ, ಅಲ್ಲಿಂದ ಟ್ರೈನ್ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದನು. ಈ ಹಿನ್ನೆಲೆಯಲ್ಲಿ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸಿನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಆರೋಪಿಯನ್ನ ಬಂಧಿಸಲಾಗಿತ್ತು.

ಇದನ್ನು ಓದಿದ್ದೀರಾ? ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆಲುವು: ನಿಂದನೆಗಳಿಂದ ಬಚಾವಾದ ಸಚಿವ ಜಮೀರ್

ಆದರೆ ಇಂದು ಪಂಚನಾಮೆಗೆಂದು ಹೊಳೆಆಲೂರಿಗೆ ತೆರಳಿ, ವಾಪಾಸ್ ಬರುವಾಗ ಈ ಘಟನೆ ಜರುಗಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...