ಗದಗ | ಪೊಲೀಸ ಇಲಾಖೆಯಿಂದ ವಾಹನಗಳ ತಪಾಸಣೆಗೆ ʼಥರ್ಡ್‌ ಐʼ

Date:

ಗದಗ ಬೆಟಗೇರಿ ಅವಳಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಮತ್ತು ಅಪರಾಧ ಪತ್ತೆ ಮಾಡಲು ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಥರ್ಡ್‌ ಐ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಅನ್ನು ಪ್ರಾರಂಭಿಸಿದೆ.

ಶುಕ್ರವಾರದಂದು (ಜ.5) ಗದಗ ನಗರದಾದ್ಯಂತ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಒಟ್ಟು 5 ಜನ ಪೊಲೀಸ ನಿರೀಕ್ಷಕರು, 9 ಜನ ಪೊಲೀಸ ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಗದಗ ಸಂಚಾರ ಪೊಲೀಸ ಠಾಣೆ ವತಿಯಿಂದ ಥರ್ಡ್‌ ಐ ಸೆಂಟರ್‌ನ ಸಿಸಿ ಕ್ಯಾಮರಾಗಳಿಂದ ದಂಡ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಡಿಫೆಕ್ಟಿವ್ ನಂಬರ್ ಪ್ಲೇಟ್ ಹೊಂದಿದ ಮತ್ತು ನಂಬರ್ ಪ್ಲೇಟ್ ಹೊಂದಿರದ, ನಕಲಿ ನಂಬರ್ ಪ್ಲೇಟ್ ಹೊಂದಿದ ವಾಹನಗಳನ್ನು ಗದಗ ಶಹರದ ಮುಳಗುಂದ ನಾಕಾ, ಲದ್ವಾ ಸರ್ಕಲ್, ಭೂಮರಡ್ಡಿ ಸರ್ಕಲ್, ಮಹಾತ್ಮಾ ಗಾಂಧಿ ಸರ್ಕಲ್, ಹಾತಲಗೇರಿ ಆಕಾದ ಹತ್ತಿರ ಹಾಗೂ ಇತರೆ ಸ್ಥಳಗಳಲ್ಲಿ ಒಟ್ಟು 145 ವಾಹನಗಳನ್ನು ವಶಪಡಿಸಿಕೊಂಡು ದಂಡ ವಿಧಿಸುವ ಮೂಲಕ ಹಾಗೂ ಕಠಿಣ ಕಾನೂನು ಕ್ರಮ ಕೈಗೊಂಡಿದೆ.

ಗದಗ ಜಿಲ್ಲೆಯಾದ್ಯಂತ ಸುಗಮ ಸಂಚಾರ ವ್ಯವಸ್ಥೆ ರೂಪಿಸಲು 2023ರಲ್ಲಿ ಥರ್ಡ್‌ ಐ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್‌ನ ಮೂಲಕ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು ಸಂಚಾರ ನಿಯಮ ಉಲ್ಲಂಘನೆ ಮಾಡಿದ ಹಾಗೂ ಕಣ್ಣು ತಪ್ಪಿಸಿಕೊಳ್ಳುತ್ತಿರುವ ವಾಹನಗಳ ಚಾಲಕರ ಮೇಲೆ ಪ್ರಸ್ತುತ ಹಾಗೂ ಮುಂದಿನ ದಿನಮಾನಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ದಂಡ ವಿಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...