ಗದಗ | ಕಾನೂನು ಸುವ್ಯವಸ್ಥೆ, ಸುಗಮ ಸಂಚಾರಿ ವ್ಯವಸ್ಥೆಗೆ ‘ಥರ್ಡ ಐ’ ಸಹಕಾರಿ: ಸಚಿವ ಎಚ್‌.ಕೆ ಪಾಟೀಲ್

Date:

ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಯು ‘ಥರ್ಡ ಐ’ ಯೋಜನೆ ಜಾರಿಗೊಳಿಸುತ್ತಿದೆ. ಇದರಿಂದ ನಗರಗಳಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆ ಸಾಧ್ಯವಾಗಲಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳ ಸಚಿವ ಡಾ.ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಗದಗದಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ‘ಥರ್ಡ ಐ’ ಕಾರ್ಯವೈಖರಿಯನ್ನು ಅವರು ವೀಕ್ಷಿಸಿದರು. ಥರ್ಡ್‌ ಐ ತಂತ್ರಜ್ಞಾನದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, “ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಈಗಾಗಲೇ ಅತ್ಯಾಧುನಿಕ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮೊದಲ ಮಹಡಿಯಲ್ಲಿ ‘ಥರ್ಡ ಐ’ ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ನಿರಂತರ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಬಗ್ಗೆ ವೀಕ್ಷಿಸಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಂತ್ರಣ ಕೊಠಡಿಗೆ ಪೊಲೀಸ್ ಇಲಾಖೆಯಲ್ಲಿ ತಾಂತ್ರಿಕ ಪದವಿ ಪಡೆದ ನುರಿತ ಅಧಿಕಾರಿಗಳನ್ನು ನಿಯೋಜಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಇದರಿಂದ ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ಹಾಗೂ ಶಿಕ್ಷೆಗೆ ಗುರಿಪಡಿಸಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ವಾರ್ತಾಧಿಕಾರಿ ವಸಂತ ಮಡ್ಲೂರ, ಪೊಲೀಸ್ ಇಲಾಖೆಯ ಡಿ.ವಾಯ್.ಎಸ್.ಪಿ, ಸಿ.ಪಿ.ಆಯ್ ಸೇರಿದಂತೆ ಗಣ್ಯರುಗಳಾದ ಪ್ರಭು ಬುರಬುರೆ, ಸಿದ್ದು ಪಾಟೀಲ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...