ಗದಗ | ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ ತೇಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಉಳಿಸಲು ಹೋದ ತಾಯಿ ಸಾವಕ್ಕ ಕೂಡ ಬಲಿಯಾಗಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗದಗದ ಮನೆಯಲ್ಲಿ ರೇಣವ್ವ ಎಂಬ ಮಹಿಳೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಮಂಜುನಾಥ ಆತ್ಮಹತ್ಯೆಗೆ ಮುಂದಾಗಿದ್ದ, ಈ ವೇಳೆ ಮಗನನ್ನು ರಕ್ಷಿಸಲು ತಾಯಿ ಕೂಡ ಹಳಿ ಮೇಲೆ ಬಿದ್ದು ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...