ಗದಗ | ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ಗೆ: ನುಡಿನಮನ

Date:

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮೃತರಾದ ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್‌ ಅಚ್ಯುತಾನಂದನ್ ಅವರಿಗೆ ಸಿಪಿಐಎಂ ಪಕ್ಷದ ವತಿಯಿಂದ  ನುಡಿನಮನ ಸಲ್ಲಿಸಲಾಯಿತು.

ಈ ವೇಳೆಯಲ್ಲಿ ಸಿಪಿಐಎಂ ಪಕ್ಷದ  ಜಿಲ್ಲಾ ಸಮಿತಿ ಸದಸ್ಯ  ಎಂ.ಎಸ್.ಹಡಪದ ಮಾತನಾಡಿ, “ಅಚ್ಯುತಾನಂದನ್ ಸಾರ್ವಜನಿಕ ಜೀವನದಲ್ಲಿ ನ್ಯಾಯ ಮತ್ತು ಜನ ಸಾಮಾನ್ಯರ ಹಿತದ ಪರವಾಗಿ ದೃಢವಾದ ಧ್ವನಿಯಾಗಿದ್ದರು. ಹೋರಾಟದ ವೇಳೆಯಲ್ಲಿ, ಕೇರಳದ ಮುಖ್ಯಮಂತ್ರಿಯಾಗಿಯೂ ಸೇರಿದಂತೆ ಅಧಿಕಾರದ ಸ್ಥಾನಗಳಲ್ಲಿ ಅವರು ತಮ್ಮ ತತ್ವಗಳಿಗೆ ನಿಷ್ಠರಾಗಿದ್ದರು. ಅವರ ನಿಧನದಿಂದಾಗಿ ಇಡೀ ಕಾರ್ಮಿಕ ವರ್ಗಕ್ಕೆ ನಮ್ಮ ಪಕ್ಷಕ್ಕೆ ತುಂಬಾಲಾರದ  ನಷ್ಟವಾಗಿದೆ” ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಮಾತನಾಡಿ, “ತಮ್ಮ  17 ನೇ ವಯಸ್ಸಿಗೆ ದೇಶದ ಸ್ವತಂತ್ರ್ಯ ಹೋರಾಟಕ್ಕೆ ಅರ್ಪಿಸಿಕೊಂಡವರು. ಭಾರತದ ಬಹು ದೊಡ್ಡ ರೈತ ಕಾರ್ಮಿಕರ ಹೋರಾಟಗಳಲ್ಲೊಂದಾದ ಪುನ್ನಪ್ರ ವಯಲಾರ್ ಸಂಘರ್ಷದಲ್ಲಿ ಪೊಲೀಸರ ವಿಚಿತ್ರ ಹಿಂಸೆಗಳಿಗೆ ಒಳಗಾದವರು. ತೆಂಗಿನ ನಾರು ಕಾರ್ಮಿಕರ, ಕೃಷಿಕೂಲಿಕಾರರ  ಸಂಘಟನೆಗಳ ಸ್ಥಾಪಕರು. ಭೂ ಹೋರಾಟದ ಧೀರರು.  ನೂರೊಂದು ವರ್ಷಗಳ ಹೋರಾಟದ ಬದುಕು, ಸರಳ ತುಂಬು ಜೀವನ. ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ನಿರ್ಮೂಲನೆ ಕ್ರಮಗಳಿಗೆ ಹೆಸರಾದವರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಮೂವರು ನೌಕರರು

ಸಿಪಿಐಎಂ ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಜಿಲ್ಲಾ ಸಮಿತಿ ಸದಸ್ಯರಾದ ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಚಂದ್ರು ರಾಠೋಡ, ಚೆನ್ನಪ್ಪ ಗುಗಲ್ತೋತ್ತರ, ಕನಕರಾಯ ಹಾದಿಮನಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...