ಗದಗ | ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ

Date:

ತಾಯ್ನೆಲಕ್ಕಾಗಿ ಶೌರ್ಯದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಇತಿಹಾಸವನ್ನು ಗಮನಿಸಿದಾಗ ದೇಶದ ರಕ್ಷಣೆಗಾಗಿ ಅನೇಕ ವೀರ ಮಹಿಳೆಯರು ತಮ್ಮ ಪ್ರಾಣವನ್ನು ಮುಡುಪಾಗಿಟ್ಟಿದ್ದನ್ನು ಸ್ಮರಿಸಬಹುದಾಗಿದೆ. ಅಂತಹ ವೀರ ಮಹಿಳೆಯರ ಸಾಲಿನಲ್ಲಿ ಒನಕೆ ಓಬವ್ವ ಸಹಿತ ವಿರಾಜಮಾನರಾಗಿದ್ದಾರೆ. ಒನಕೆ ಓಬವ್ವ ಅವರ ಸಾಹಸ ಎಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ವಿರುಪಾಕ್ಷ ಉಪನ್ಯಾಸ ನೀಡಿ, ‘ಚಿತ್ರದುರ್ಗದ ನಾಯಕರ ಬಳಿ ಕಹಳೆಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಮುದ್ದಹನುಮಪ್ಪನ ಹೆಂಡತಿಯೇ ಓಬವ್ವ. ಹೈದರ್ ಅಲಿಯು ಚಿತ್ರದುರ್ಗ ಕೋಟೆಯನ್ನು ಅಕ್ರಮಿಸಲು ವಿಫಲ ನಾದನು. ನಂತರ ಹೈದರ್ ಅಲಿಯು ಕುಟಿಲ ಮಾರ್ಗದಿಂದ ಕೋಟೆಯನ್ನು ಭೇದಿಸಲು ಗೂಢಚಾರರನ್ನು ನೇಮಿಸಿ, ತಯಾರಿ ನಡೆಸಿದರು. ಮುದ್ದಹನುಮಪ್ಪನು ಮಧ್ಯಾಹ್ನ ಮನೆಗೆ ಬಂದಾಗ ಓಬವ್ವಳು ಆತನಿಗೆ ಊಟಕ್ಕೆ ಬಡಿಸಿ ಕುಡಿಯುವ ನೀರು ತರಲು ಸಿಹಿ ನೀರಿನ ಕೊಳಕ್ಕೆ ಬಂದಳು. ಕಳ್ಳಗಿಂಡಿಯ ಕಡೆ ಯಿಂದ ಶತ್ರುಗಳ ಅಸ್ಪಷ್ಟ ಮಾತುಗಳು, ಸುಳಿವು ಸಿಕ್ಕ ತಕ್ಷಣವೇ ಕಳ್ಳಗಿಂಡಿಯ ಬಳಿಗೆ ಶತ್ರುಗಳನ್ನು ಎದುರಿಸಲು ಸಿದ್ಧಳಾದಳು. ಒನಕೆಯನ್ನು ಹಿಡಿದು ಒಬ್ಬೊಬ್ಬರಾಗಿ ನುಸುಳಿ ಬಂದವರ ತಲೆಗೆ ಒನಕೆ ಪೆಟ್ಟು ಕೊಟ್ಟು ಕೊಂದು ಹಾಕತೊಡಗಿದಳು’ ಎಂದು ತಿಳಿಸಿದರು.

‘ಊಟ ಮುಗಿಸಿದ ಮುದ್ದಹನುಮಪ್ಪನು ಕುಡಿಯುವ ನೀರು ತರಲು ಹೋದ ಓಬವ್ವಳನ್ನು ಕಾಣಲು ಕೊಳದ ಬಳಿಗೆ ಬಂದಾಗ ಅಲ್ಲಿಯ ಸನ್ನಿವೇಶವನ್ನು ನೋಡಿ ತನ್ನ ಕಹಳೆ ಮೊಳಗಿಸಿದನು. ದುರ್ಗದ ಸೈನಿಕರು ಧಾವಿಸಿ ಬಂದು ಶತ್ರುಗಳನ್ನು ಹೊಡೆದೋಡಿಸಿದರು. ಹೀಗೆ ಶತ್ರುಗಳ ಕುಟಿಲ ಆಕ್ರಮಣವನ್ನು ತಡೆದು ಓಬವ್ವಳು ತನ್ನ ಸಮಯ ಪ್ರಜ್ಞೆ ಹಾಗೂ ಧೈರ್ಯ ಶೌರ್ಯ ಮೆರೆದಿದ್ದು ಎಲ್ಲರಿಗೂ ಆದರ್ಶಪ್ರಾಯವಾಗಿದೆ’ ಎಂದು ಇತಿಹಾಸ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತ ದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ., ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾ ಖೆಯ ಅಧಿಕಾರಿಗಳು, ಸಮುದಾಯದ ಮುಖಂಡರು, ಗಣ್ಯರು, ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...