ಗದಗ | ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಸಮಸ್ಯೆ ಬಗೆಹರಿಸುವಂತೆ ಮನವಿ

Date:

  • ವಿದ್ಯಾದಾನ ಶಿಕ್ಷಣ ಸಮಿತಿ ಆಡಳಿತ ಮಂಡಳಿಯಿಂದ ಬೆದರಿಕೆ
  • ಪತ್ರಿಕಾಗೋಷ್ಠಿಯಲ್ಲಿ ಯೂಸೂಪ್ ಮಜ್ಜಗಿ ಕುಟುಂಬ ಆರೋಪ

ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಬಗ್ಗೆ ಎದ್ದಿರುವ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಮಜ್ಜಗಿ ಕುಟುಂಬದ ಸದಸ್ಯ ಯೂಸಫ್‌ ಮಜ್ಜಗಿ ಒತ್ತಾಯಿಸಿದ್ದಾರೆ.

ಗದಗ ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿರುವ ಅವರು, “ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನವು ಮಜ್ಜಗಿ ಕುಟುಂಬಕ್ಕೆ ಸೇರಿದ್ದು, 1946ರಲ್ಲಿ ವಿದ್ಯಾದಾನ ಶಿಕ್ಷಣ ಸಮಿತಿಗೆ ಮಜ್ಜಗಿ ಕುಟುಂಬದವರು 99 ವರ್ಷ ಬಾಡಿಗೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಬಾಡಿಗೆ ಹಣ ನೀಡಿಲ್ಲ, ಬಾಡಿಗೆ ಕೊಟ್ಟ ಸಂದರ್ಭದಲ್ಲಿ ಈ ಜಾಗದಲ್ಲಿ ಯಾವುದೇ ಕಟ್ಟಡ ಕಟ್ಟಬಾರದೆಂದು ಕರಾರು ಪತ್ರದಲ್ಲಿ ಇದ್ದರೂ ವಿವಿಧ ಕಟ್ಟಡಗಳನ್ನು ನಿರ್ಮಿಸಿ, ಕರಾರು ಪತ್ರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟು ಮಾತ್ರವಲ್ಲದೆ ಇದೇ ಜಾಗದ ಮೇಲೆ ರೆಡ್ಡಿ ಸಹಕಾರಿ ಬ್ಯಾಂಕಿನಲ್ಲಿ 50 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ ಹಾಗೂ ವಿದ್ಯಾದಾನ ಶಿಕ್ಷಣ ಸಮಿತಿ ಮಂಡಳಿಯ ಆಡಳಿತಕ್ಕೆ ಒಳಪಡುವ ಬಿಇಡಿ ಕಾಲೇಜಿಗೆ 33 ವರ್ಷ ಬಾಡಿಗೆ ಕೊಟ್ಟಿದ್ದು, ಇದ್ಯಾವ ಮಾಹಿತಿಯನ್ನು ಮೂಲ ಮಾಲೀಕರಿಗೆ ತಿಳಿಸದೇ ಬಾಡಿಗೆ ಕರಾರು ಪತ್ರದ ನಿಯಮ ಉಲ್ಲಂಘಿಸಿದ್ದಾರೆ” ಎಂದು ಕಿಡಿ ಕಾರಿದ್ದಾರೆ.

“ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನ ನಮ್ಮದೆಂದು ಕೇಳಿದರೆ, ರಾಜಕೀಯ ಬಲ, ಅಧಿಕಾರ ಬಲ ಹಾಗೂ ಹಣಬಲ ಇರುವ ಕೆಲವರು ಬೆದರಿಗೆ ಹಾಕುತ್ತಿದ್ದಾರೆ. ಇದರ ವಿರುದ್ಧ ಮಜ್ಜಗಿ ಕುಟುಂಬದವರು ಕೋರ್ಟ್‌ ಮೊರೆ ಹೋಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ದಲಿತ ಕಲಾ ಮಂಡಳಿ ಮುಖಂಡ ಶರೀಪ್ ಬಿಳಿಯಲಿ, ಮಜ್ಜಗಿ ಕುಟುಂಬದ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...