ಗದಗ | ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರ ಜಾಗೃತಿ; ಸ್ವೀಪ್‌ ಸಭೆಯ ನಿರ್ಣಯ

Date:

ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕುರಿತು ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ (SVEEP) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆಯ ರಾಜ್ಯದ ನೋಡಲ್ ಅಧಿಕಾರಿ ಪಿ ಎಸ್ ವಸ್ತ್ರದ ಮಾತನಾಡಿ, “ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ನಾಗರಿಕನು ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆ, ಶಿಕ್ಷಣ ಸಂಸ್ಥೆಗಳು, ಹಾಗೂ ಸಾಮಾಜಿಕ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕು. ಯುವ ಮತದಾರರು ಚುನಾವಣೆಯ ಪ್ರಮುಖ ಶಕ್ತಿ. ಅವರಲ್ಲಿ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮಾಡಿಕೊಳ್ಳಬೇಕು. ವಿಡಿಯೋ, ಪೋಸ್ಟರ್, ಸಣ್ಣ ಜಾಹೀರಾತುಗಳ ಮೂಲಕ ಮತದಾನದ ಮಹತ್ವವನ್ನು ತಲುಪಿಸಬೇಕು” ಎಂದು ಸಲಹೆ ನೀಡಿದರು.

“ಅಧಿಕಾರಿಗಳು ಮತ್ತು ಸಿಬ್ಬಂದಿ ಸದಸ್ಯರಿಗೆ ಮತದಾರರ ಶೇಕಡಾವಾರು ಹೆಚ್ಚಿಸುವ ಕಾರ್ಯವನ್ನು ಗುರಿಯನ್ನಾಗಿಸಿಕೊಂಡು ಕಾರ್ಯ ಯೋಜನೆ ರೂಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳು ತಮ್ಮ ತಮ್ಮ ವಿಭಾಗಗಳಲ್ಲಿ ಕೈಗೊಳ್ಳಬಹುದಾದ ಜಾಗೃತಿ ಕ್ರಮಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿದರು. ಶಾಲೆ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಮತದಾರರ ರ‍್ಯಾಲಿಗಳು, ಕಿರುಚಿತ್ರ ಪ್ರದರ್ಶನ, ಮತದಾರ ಪ್ರೋತ್ಸಾಹ ಸ್ಪರ್ಧೆಗಳು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹೇಳಿದರು

ಸಭೆಯಲ್ಲಿ ಮಹಿಳಾ ಮತ್ತು ಯುವ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿಶೇಷ ಅಭಿಯಾನಗಳನ್ನು ರೂಪಿಸುವ ಅಗತ್ಯವಿದೆ ಎಂದು ಪಿ ಎಸ್ ವಸ್ತ್ರದ ತಿಳಿಸಿದರು.

ಪ್ರತ್ಯೇಕವಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಸೂಚನೆ ನೀಡಲಾಯಿತು.

ಇದನ್ನೂ ಓದಿ: ಗದಗ | ಸಂವಿಧಾನ ಕುರಿತು ರಸಪ್ರಶ್ನೆ ಸ್ಪರ್ಧೆ

ಸ್ವೀಪ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿ, ಪ್ರಜಾಸತ್ತಾತ್ಮಕ ಚೇತನ ಹೆಚ್ಚಿಸುವುದು ಸಭೆಯ ಪ್ರಮುಖ ಉದ್ದೇಶ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ ಆರ್ ಮುಂಡರಗಿ, ಸಹಾಯಕ ಆಯುಕ್ತ ಗಂಗಪ್ಪ ಎಂ, ಆರ್ ಎಸ್ ಬುರಡಿ, ಶಿದ್ದಲಿಂಗ ಮಸಾನಾಯಕ, ಡಾ. ಎಸ್ ಎಸ್ ನೀಲಗುಂದ, ಪದ್ಮಾವತಿ ಜಿ, ಅಮಿತ್ ಬಿದರಿ, ವಸಂತ ಮಡ್ಲೂರ, ಶಿವಕುಮಾರ ಕುರಿಯವರ, ಶರಣು ಗೊಗೇರಿ, ಜಿ ಎಂ ಮುಂದಿನಮನಿ, ಕೆ ಮಹಾಂತೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ಶಿಕ್ಷಣ ಇಲಾಖೆಯ ಪ್ರತಿನಿಧಿಗಳು ಹಾಗೂ ಸ್ವೀಪ್ ನೊಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...