ಗದಗ | ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆಯಾಗುತ್ತಿದೆ ವಿವಿ; ಮುತ್ತು ಬಿಳಿಯಲಿ ಆರೋಪ

Date:

ಎಚ್.ಕೆ ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಿದ್ದಾಗ ಗದಗಿಗೆ ಕೊಡುಗೆಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯನ್ನು ಸ್ಥಾಪಿಸಿದರು. ಆದರೆ, ಈಗ ವಿವಿ ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆ ಆಗುತ್ತಿದೆ ಎಂದು ದಲಿತ ಪರ ಹೋರಾಟಗಾರ ಮುತ್ತು ಬಿಳಿಯಲಿ ಆರೋಪಿಸಿದ್ದಾರೆ.

ಗದಗ ಪಟ್ಟಣದಲ್ಲಿ ಡಿ.13ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಈಗ ಆರ್.ಎಸ್.ಎಸ್ ಶಾಖೆಯಾಗಿ ಪರಿವರ್ತನೆಯಾಗಿದೆ. ಈಗ ಕಾರ್ಯನಿರ್ವಹಿಸುತ್ತಿರುವ ಕುಲಪತಿ ವಿಷ್ಣುಕಾಂತ ಚಟಪಲ್ಲಿ ಆರ್.ಎಸ್.ಎಸ್‌ನ ಕಾರ್ಯಕರ್ತನಂತೆ ವರ್ತಿಸುತ್ತಿದ್ದಾರೆ. ಇವರು ವಿಶ್ವವಿದ್ಯಾಲಯಕ್ಕೆ ಕಾಲಿಟ್ಟಾಗಿಲಿಂದಲೂ ಕೋಮುವಾದಿ ಸಂಘಟನೆಯ ಸಹಕಾರದಿಂದ ವಿಶ್ವವಿದ್ಯಾಲಯದಲ್ಲಿ ಒಂದಿಲ್ಲೊಂದು ಕಾರ್ಯಕ್ರಮವನ್ನು ಮಾಡುತ್ತ ಬರುತ್ತಿದ್ದಾರೆ ಎಂದು ಮುತ್ತು ಬಿಳಿಯಲಿ ಆರೋಪಿಸಿದರು.

ಇದೀಗ ತಾಜಾ ಉದಾಹರಣೆ ಅಂದರೆ, ಇದೇ ತಿಂಗಳು 17ರಂದು ವಿಶ್ವವಿದ್ಯಾಲಯದಲ್ಲಿ ಆರ್.ಎಸ್.ಎಸ್‌ನ ಸಹಭಾಗಿ ಸಂಘಟನೆಗಳೊಂದಿಗೆ ವಚನ ದರ್ಶನ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದ ಎಲ್ಲ ಅತಿಥಿಗಳು ಆರ್.ಎಸ್.ಎಸ್ ನ ಭಾಗವಾಗಿರುವವರು. ಆಶ್ಚರ್ಯ ಅಂದರೆ ಅತಿಥಿಗಳ ಪಟ್ಟಿಯಲ್ಲಿ ನಮ್ಮ ರಾಜ್ಯದ ವೈಚಾರಿಕ ಮಠಗಳಲ್ಲಿ ಒಂದು ಎಂದು ಅನ್ನಿಸಿಕೊಳ್ಳುವ ಗದಗನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿಗಳು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12 ನೇ ಶತಮಾನದಲ್ಲಿ ಬಸವಣ್ಣನವರು ಹಾಗೂ ಬಸವಾದಿ ಶರಣರ ಜೊತೆ ಸೇರಿ ಸನಾತನದ ವಿರುದ್ಧ ವಚನ ಚಳುವಳಿಯನ್ನು ಕಟ್ಟಿದರು ಬಸವ ತತ್ವ ಅನುಸರಿಸುವ ಸಿದ್ಧರಾಮ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ದುರಂತ.

ಇಡೀ ಬಸವ ತತ್ವದ ವಿರೋಧಿಯಾಗಿ, ಸಮಾನತೆಯ ವಿರೋಧಿಯಾಗಿ ಪ್ರಜಾಪ್ರಭುತ್ವದ ವಿರುದ್ಧ ಕೆಲಸ ಮಾಡುವ ಆರ್.ಎಸ್.ಎಸ್ ಇಂತಹ ಕಾರ್ಯಕ್ರಮಕ್ಕೆ ಸಿದ್ಧರಾಮ ಸ್ವಾಮೀಜಿಗಳು ಗೊತ್ತಿದ್ದು ಹೋಗಿರೋದ ಅಥವಾ ಗೊತ್ತಿಲ್ಲದೆ ಹೋಗಿರೋದ ಎಂದು ಅವರೆ ಸ್ಪಷ್ಟಪಡಿಸಬೇಕು.

ಈಗಿನ ಕುಲಪತಿ ಈ ಹಿಂದೆಯೂ ಎಬಿವಿಪಿಯ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಮಾಡಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ಆರ್.ಎಸ್.ಎಸ್ ಕೇಂದ್ರವನ್ನಾಗಿ ಮಾರ್ಪಡಿಸುತ್ತಿದ್ದಾರೆ ಎಂಬ ಅನುಮಾನಗಳಿವೆ.

ಈಗಿನ ಕುಲಪತಿಯಿಂದ ವಿಶ್ವವಿದ್ಯಾಲಯವನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. 17ರಂದು ನಡೆಯುವ ಕಾರ್ಯಕ್ರಮ ತಡೆಯೋಣ ವಿಶ್ವವಿದ್ಯಾಲಯವನ್ನು ಉಳಿಸೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...