ಗದಗ | ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು: ದಾವಲಾಸಾಬ್ ತಾಳಿಕೋಟಿ ಒತ್ತಾಯ

Date:

“ವಕ್ಪ್ ತಿದ್ದುಪಡಿ ಮಸೂದೆ ಜಾರಿಯಿಂದ ಮುಸ್ಲಿಂ ಸಮೂದಾಯಕ್ಕೆ ಮಾರಕವಾಗಲಿದೆ. ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು” ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ನೇತೃತ್ವದಲ್ಲಿ ವಕ್ಪ್ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ, ಜಾಮೀಯ ಮಸೀದಿಯಿಂದ ಕಪ್ಪು ಪಟ್ಟಿ ಧರಿಸಿ, ಕಾಲ್ನಡಿಗೆ ಮೂಲಕ ಕೆ.ಕೆ.ಸರ್ಕಲ್ ವೃತ್ತದವರೆಗೆ ಮೆರವಣಿಗೆ ನಡೆಸಿ  ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಧಾರ್ಮಿಕ ಹಕ್ಕನ್ನು ಕಾನೂನಿನಲ್ಲಿ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವಂತಹ, ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಮಂತ್ರಿ ದೇಶದ ಸಂಪತ್ತನ್ನು ಒಂದೊಂದಾಗಿ ಮಾರುತ್ತಿದ್ದಾರೆ. ಈಗ ಮುಸಲ್ಮಾನರ ಸಂಪತ್ತಿನ ಮೇಲೆ ಕಣ್ಣು ಹಾಕಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ವಕ್ಫ್ ಆಸ್ತಿ ಮತ್ತು ದೇಶದ ಭವಿಷ್ಯಕ್ಕೆ ಅಪಾಯವನ್ನುಂಟು ಮಾಡುವ ಹಲವು ತಿದ್ದುಪಡಿಗಳಿದ್ದು, ಕೂಡಲೇ ಈ ಮಸೂದೆಯನ್ನು ಹಿಂಪಡೆಯಬೇಕು”ಎಂದು ಆಗ್ರಹಿಸಿದರು.

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಚೇರಮನ್ನ ಎ.ಡಿ.ಕೋಲಕಾರ ಮಾತನಾಡಿ, “ಧಾರ್ಮಿಕ ಸ್ವಾತಂತ್ರ್ಯ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯಾಗಿದೆ. ವಕ್ಫ್ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಹಾನಿ ಮಾಡುತ್ತದೆ. ಮಸೂದೆಯನ್ನು ಹಿಂಪಡೆಯಲು ರಾಷ್ಟಪತಿಗಳು ಮಧ್ಯಸ್ಥಿಕೆ ವಹಿಸಿ ಕೋಟ್ಯಾಂತರ ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಪುರಸಭೆ ಸದಸ್ಯ ರಾಜು ಸಂಗ್ಲೀಕಾರ ಮಾತನಾಡಿ, ವಕ್ಪ್ ತಿದ್ದುಪಡೆ ಮಸೂದೆ ದ್ವೇಷಪೂರಿತ ಕಾನೂನಾಗಿದ್ದು, ಯಾವುದೇ ಕಾರಣಕ್ಕೂ ಮಸೂದೆ ಜಾರಿಗೆ ತರಬಾರದು. ಒಂದು ವೇಳೆ ಜಾರಿಗೆ ತಂದಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಎಲ್ಲ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಂತ ಹಂತವಾಗಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

ಪ್ರತಿಭಟನಾ ಮೆರವಣಿಗೆಯಲ್ಲಿ ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ, ಎಸ್.ಎಂ ಆರಗಿದ್ದಿ, ನಾಸೀರ್ ಸುರಪುರ, ಮಾಸುಮಲಿ ಮದಗಾರ,, ದಾದೇಸಾಬ ಹಣಗಿ, ಉಪಾಧ್ಯಕ್ಷ ಹಾಸೀಂ ಹಿರೇಹಾಳ, ಆರೀಫ್ ಮನಿಯಾರ, ಆಸೀಫ್ ಮೋಮಿನ್,  ಭಾಷು ಮುದಗಲ್ಲ, ಇಮ್ರಾನ್ ಅತ್ತಾರ, ಪತ್ತೇಸಾಬ ತಹಶಿಲ್ದಾರ, ಖಾಸಿಂಸಾಬ ಮುಚ್ಚಾಲಿ, ಮೆಹಬೂಬ್ ಮುದಗಲ್ಲ, ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...