ಗದಗ | ವಕ್ಫ್‌ ತಿದ್ದುಪಡಿ, ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರ ಒತ್ತಾಯ

Date:

ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ಜನರ ಹಾಗೂ ಮಠಾಧೀಶರ ಆಸ್ತಿಯ ಮೇಲೆ ಕಣ್ಣು ಹಾಕಿರುವುದು ಖಂಡನಿಯವಾಗಿದ್ದು, ಇದಕ್ಕೆ ಸರ್ಕಾರವೇ ಹೊಣೆಯಾಗಿದೆ. ಕೂಡಲೇ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜನಸಾಮಾನ್ಯರ, ಮಠಮಾನ್ಯಗಳ ಆಸ್ತಿಯನ್ನು ಕೈಬಿಡಬೇಕು. ಹಾಗೂ ಚಳಿಗಾಲದ ಅಧಿವೇಶನದಲ್ಲಿ ರೈತರಿಗೆ ಬೆಂಬಲ ಬೆಲೆ ಘೋಷಿಸಬೇಕು” ಎಂದು ಕರ್ನಾಟಕ ರೈತಸೇನೆ ಉಪಾಧ್ಯಕ್ಷ ಶಿವಲಿಂಗಪ್ಪ ಭೂಪಳಾಪುರ ಆಗ್ರಹಿಸಿದರು.

ಗದಗ ಜಿಲ್ಲೆಯ ರೋಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರೈತಸೇನೆ ವತಿಯಿಂದ ವಕ್ಫ್‌ ಕಾಯ್ದೆ ತಿದ್ದುಪಡಿ ಹಾಗೂ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ರಾಜ್ಯದಲ್ಲಿ ರೈತ ಸಂಘಟನೆಗಳು ಸೇರಿ ಅನೇಕರು ವಕ್ಫ್‌ ವಿರುದ್ಧವಾಗಿ ಪ್ರತಿಭಟನೆಗಳು ನಡೆದಿವೆ. ರಾಜ್ಯದಲ್ಲಿ ವಕ್ಫ್‌ ಜನಸಾಮಾನ್ಯರ ಆಸ್ತಿಯಲ್ಲೂ ವಕ್ಫ್‌ ಎಂದು ಹೆಸರು ಕಾಣುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡುತ್ತಿದೆ. ಹಾಗಾಗಿ ವಕ್ಫ್‌ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವರುಣಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ; ಸರ್ಕಾರಕ್ಕೆ ಎಚ್ಚರಿಕೆ

“ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರ ಬೆಳೆನಷ್ಟದ ಪರಿಹಾರ ಬಂದಿರುವುದಿಲ್ಲ. ಕೂಡಲೇ ಬೆಳೆಪರಿಹಾರ ಬಿಡುಗಡೆ ಮಾಡಬೇಕು. ಚಳಿಗಾಲದ ಅಧಿವೇಶನದಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು” ಎಂದು ಶಿವಲಿಂಗಪ್ಪ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಮಹೇಶ್ ವಿಠ್ಠಪ್ಪನವರ, ವೀರಬಸಪ್ಪ ಅಂದಾನಪ್ಪನವರ, ಆನಂದ್ ಮಲ್ಲಾಪುರ, ಮಂಜುನಾಥ್ ಮಾಳವಾಡ, ವೀರಯ್ಯ ಸುರೇಬಾನ, ಕಲ್ಲನಗೌಡ ಪಾಟೀಲ್, ವೀರಪ್ಪ ನಾಶಿಪುಡಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...