ಗದಗ | ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು: ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ

Date:

“ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು” 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಒತ್ತಾಯಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಿಯ ಭಾಷಣದಲ್ಲಿ ಮಾತನಾಡಿದರು.

“ಮಾತೃ ಭಾಷೆಯಾದ ಕನ್ನಡ ಭಾಷೆ ನಶಿಸುತ್ತಿದೆ. ಕಾಸರಗೋಡು ಪ್ರದೇಶವು ಕೇರಳ ಪಾಲಾಯಿತು. ಬೆಳಗಾವಿ ಬೀದರ್ ನಲ್ಲಿ ಮರಾಠಿ ಭಾಷಿಕರ ಸಂಖ್ಯೆ ಹೆಚ್ಚತ್ತಿದೆ. ರಾಯಚೂರು ಭಾಗವು ತೆಲುಗು ಭಾಷಿಕರ ಪಾಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿ.ಎನ್. ಪಾಟೀಲ ರಚಿಸಿದ ತಾಯಿ ಭುವನೇಶ್ವರಿ ಭಾವಚಿತ್ರವೇ ಕನ್ನಡ ತಾಯಿಯ ಅಧಿಕೃತ ಭಾವಚಿತ್ರವಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಲಿ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸೀಮಾತೀತ ಅಂತಃಕರಣ ಉಂಟುಮಾಡುತ್ತವೆ. ಇಂಥ ಅಕ್ಷರ ಗೋಷ್ಠಿಗಳು ನಿರಂತರವಾಗಿ ಮಾಡಬೇಕು. ಅದೇ ರೀತಿ ರಾಜ್ಯದಲ್ಲಿ 1965ರಿಂದ ಸರಕಾರ ಕನ್ನಡ ಶಾಲೆ ಆರಂಭಿಸಲಾಗಿದೆ. ಆದರೆ ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ” ಎಂದರು.

“ಆಧುನಿಕ ಕವಿ ಚನ್ನವೀರ ಕಣವಿ ನಿಧನರಾಗಿ ವರ್ಷಗಳೆ ಗತಿಸಿದರೂ ಅವರ ಕುರಿತಾದ ಯಾವುದೇ ಕಾರ್ಯಕ್ರಮ ಗದಗದಲ್ಲಿ ನಡೆದಿಲ್ಲ. ಎಲ್ಲಿಯ ವರೆಗೆ ಕನ್ನಡ ಸಾಹಿತ್ಯ ಶ್ರೇಷ್ಠರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುವುದಿಲ್ಲವೋ ಅಲ್ಲಿಯ ವರೆಗೆ ಹುಯಿಲಗೋಳ ನಾರಾಯಣರು ಬರೆದ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯನ್ನೇ ಹಾಡಬೇಕು” ಎಂದರು.

‘ಪಕ್ಕದ ಧಾರವಾಡ ಜಿಲ್ಲೆಯಲ್ಲಿ ಒಂಬತ್ತು ಪ್ರತಿಷ್ಠಾನಗಳಿವೆ. ನಮ್ಮಲ್ಲಿ ಒಂದು ಕೂಡ ಇಲ್ಲ. ರನ್ನ ಪ್ರತಿಷ್ಠಾನ ಅದ್ಭುತ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಚಾಮರಸನ ಬಗ್ಗೆ ಸಂಶೋಧನೆ, ಚೆನ್ನವೀರ ಕಣವಿ, ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಸ್ಥಾಪನೆ ಆಗಬೇಕಿದೆ. ಎಂದರು.

ನಮ್ಮಲ್ಲಿ ಚಾಮರಸನನ್ನು ಮುಟ್ಟುವರರಿಲ್ಲ. ಪ್ರಭುಲಿಂಗಲೀಲೆ ಧಾರ್ಮಿಕ ಕಾವ್ಯ ಅಲ್ಲ. ಯಾವುದೇ ದೇಶದವರು ಅದನ್ನು ಓದಿದರೂ ತಮ್ಮ ಬದುಕನ್ನು ಎತ್ತರಿಸಿಕೊಳ್ಳಬಹುದು. ಪ್ರತಿವರ್ಷ ಒಂದು ದಿನವಾದರೂ ವಿಚಾರ ಸಂಕಿರಣ ನಡೆಸಬೇಕು’ ಎಂದು ಪ್ರೊ. ಚಂದ್ರಶೇಖರ ವಸ್ತ್ರದ ಆಶಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...