ಗದಗ | ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು: ಚಿಂತಕ ಬಿ ಪೀರಭಾಷಾ

Date:

“ಬೆಂಕಿ ಹಚ್ಚುವವರ ಕೈಯಿಂದ ಇಸಿದುಕೊಂಡು ನಾವು ದೀಪ ಹಚ್ಚಬೇಕು. ಈ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಪ್ರೀತಿ, ಸಮಾನತೆ ಶಾಂತಿಯನ್ನು ಕಟ್ಟಬೇಕು” ಎಂದು ಪ್ರಗತಿಪರ ಚಿಂತಕ ಬಿ ಪಿರಭಾಷಾ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಶಾದಿಮಹಲ್ ಭವನದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಗಳ ಸಹಯೋಗದೊಂದಿಗೆ ನಡೆದ ಮಹಾತ್ಮಾ ಹುತಾತ್ಮ ‘ಸೌಹಾರ್ದ ಸಂಕಲ್ಪ ದಿನ’ ಸೌಹಾರ್ದ ಗೀತೆಗಳ ಗಾಯನ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

“ಈ ದೇಶದ ಸ್ವಾತಂತ್ರ್ಯಕ್ಕಾಗಿ ಇಡೀ ಜೀವನದುದ್ದಕ್ಕೂ ಸ್ವಾರ್ಥವಿಲ್ಲದೆ ಮನುಷ್ಯತ್ವಕ್ಕಾಗಿ ಪೇಚಾಡಿ, ಕಟ್ಟಕಡೆಗೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧಿಯವರನ್ನು ನಾಥೂರಾಮ್ ಗೋಡ್ಸೆ ಕೊಂದನು. ಈ ಗೋಡ್ಸೆಗೆ ಸಾವರ್ಕರ್ ಗುರುವಾಗಿದ್ದನು. ಇಪ್ಪತ್ತು ವರ್ಷಗಳಿಂದಲೇ ಗಾಂಧೀಜಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ವೀರ, ದೇಶಭಕ್ತನೆಂದು ಈ ದೇಶದ ಮನುವಾದಿಗಳು ಸಂಭ್ರಮಿಸುತ್ತಿದ್ದಾರೆ. ಕೊಲ್ಲುವ ಹೆಸರಿನಲ್ಲಿ ಧರ್ಮವನ್ನು ಬಳಸುವ ಯಾವ ವ್ಯಕ್ತಿಯೇ ಆಗಲಿ ಅವನು ಮನುಕುಲಕ್ಕೇ ಕಂಟಕ” ಎಂದು ಹೇಳಿದರು.

“ಗಾಂಧಿ ಆಫ್ರಿಕಾದಲ್ಲಿ ದುಡಿಯುವುದಕ್ಕೆ, ವಕೀಲಿ ವೃತ್ತಿ ಮಾಡುವುದಕ್ಕೆ ಹೋಗಿದ್ದರು. ಆದರೆ ನಮ್ಮ ದೇಶಕ್ಕೆ ಹಿಂತಿರುಗಿ ಬಂದು ಬಡವರ ಸಲುವಾಗಿ ವಕೀಲಿಕಿ ಬಿಟ್ಟು ಹೋರಾಟ ಮಾಡಿದರು. ಈ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇವರೊಂದಿಗೆ ಲಕ್ಷಾಂತರ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಂ ಎಸ್ ಹಡಪದ ಪ್ರಸ್ತಾವಿಕ ಮಾತನಾಡಿ, “ಜನವರಿ 30 ನಾಥೂರಾಮ್ ಗೋಡ್ಸೆಯಿಂದ ಗಾಂಧಿ ಹತ್ಯೆಯಾದ ದಿನ. ದೇಶದಲ್ಲಿ ಅಧಿಕಾರ ಹಿಡಿಯಲು ಧರ್ಮ, ಸೌಹಾರ್ದತೆಯನ್ನು ಒಡೆದು ಮತೀಯವಾದಿಗಳು ಕೆಲಸ ಮಾಡುತ್ತ ಬಂದಿದ್ದಾರೆ. ಹಿಂದೂ ಮುಸ್ಲಿಂ ಸೌಹಾರ್ದತೆ ನಡುವೆ ಕಲಹವನ್ನುಂಟುಮಾಡಿ, ಈ ದೇಶದಲ್ಲಿ ಸಾವು ನೋವುಗಳನ್ನು ಸೃಷ್ಟಿಮಾಡುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

“ಕೋಮು ಸೌಹಾರ್ದತೆಯನ್ನು ಹಾಳುಗೆಡುವುತ್ತಿರುವ ಇಂತಹ ಸಂದರ್ಭದಲ್ಲಿ ಜೀವಪರ, ಜಾತ್ಯತೀತ, ಶಾಂತಿ, ಸೌಹಾರ್ದ ಬಯಸುವ ಎಲ್ಲ ಪ್ರಗತಿಪರ ಚಿಂತಕರು, ಬರಹಗಾರರು ಸೇರಿ ಗಾಂಧಿ ಹತ್ಯೆಯ ದಿನದಂದು ಜಾತ್ಯತೀತ, ಶಾಂತಿ ಸೌಹಾರ್ದತೆಯನ್ನು ಸಾರಲು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಎಂ ಎಸ್ ಹಡಪದ ಹೇಳುದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಬಿ ಎ ಕೆಂಚರೆಡ್ಡಿಯವರು ಈ ದಿನ.ಕಾಮ್‌ನ “ನಮ್ಮ ಕರ್ನಾಟಕ: ನಡೆದ 50 ಹೆಜ್ಜೆ- ಮುಂದಿನ ದಿಕ್ಕು” ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

WhatsApp Image 2025 01 31 at 10.25.35 AM

ಈ ಸುದ್ದಿ ಓದಿದ್ದೀರಾ? ಧಾರವಾಡ | ಕ್ರೀಡಾಪಟುಗಳು ಸೋತರೂ ಗೆಳೆತನ‌ ಬಿಡಬೇಡಿ: ಗೌರಮ್ಮ ಬಳೋಗಿ

ಕೃಷಿಕೂಲಿಕಾರರ ಸಂಘಟನೆ ಮುಖಂಡ ಬಾಲು ರಾಠೋಡ, ಡಿವೈಎಫ್ಐ ಮುಖಂಡ ದಾವಲಸಾಬ ತಾಳಿಕೋಟಿ, ನಾಸೀರ ಸುರಪುರ, ಓದಸನೂರುಮಠ, ಮೆಹಬೂಬ್ ಹವಾಲ್ದಾರ್, ನಿವೃತ್ತ ಶಿಕ್ಷಕ ಬಿ ಎನ್ ಜಾಲಿಹಾಳ, ನೀಲಮ್ಮ ಹಿರೇಮಠ, ಪ್ರಕಾಶ, ಮಾಸುಮಲಿ ಮದಗಾರ, ಚೆನ್ನಪ್ಪ ಗುಗಲೋತ್ತರ, ಬೀದಿಬದಿ ವ್ಯಾಪಾರಸ್ಥರು, ಅಂಗನವಾಡಿ‌ ನೌಕರರು, ವಿದ್ಯಾರ್ಥಿ-ಯುವಜನರು, ಕಟ್ಟಡ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...