ಗದಗ | ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಮಹಿಳಾ ಸ್ವ-ಸಹಾಯ ಸಂಘಗಳು ಶ್ರಮಿಸಬೇಕು: ಸಿ ಬಿ ದೇವರಮನಿ

Date:

ಗ್ರಾಮೀಣ ಪ್ರದೇಶಗಳ ಮತದಾರರಲ್ಲಿ ಕಡ್ಡಾಯ ಮತದಾನದ ಬಗ್ಗೆ ಮಹಿಳಾ ಸ್ವ-ಸಹಾಯ ಸಂಘಗಳು ಹೆಚ್ಚು ಜಾಗೃತಿ ಮೂಡಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾಲೂಕಿನ ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮವಹಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ‌ ಸಿ ಬಿ ದೇವರಮನಿ ಹೇಳಿದರು.

ಗದಗ ಜಿಲ್ಲಾ ಮತ್ತು ನರಗುಂದ ತಾಲೂಕು ಚುನಾವಣೆ ಸ್ವೀಪ್ ಸಮಿತಿಯಿಂದ ನರಗುಂದ ನಗರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಗೆ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು.

“ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಂಘಟನೆಗಳು ಪ್ರಭಲವಾಗಿವೆ. ಗ್ರಾಮೀಣ ಪ್ರದೇಶದ ಜನರ ಜತೆ ನಿರಂತರವಾಗಿ ಒಡನಾಟ ಇಟ್ಟುಕೊಂಡಿರುವ ಮಹಿಳಾ ಸಂಘಟನೆಗಳು ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ವಲಸೆ ಹೋಗಿದ್ದರೆ ಅಂತಹ ಕುಟುಂಬಗಳ ಸದಸ್ಯರನ್ನು ಸಂಪರ್ಕಿಸಿ ಮತದಾನದ ದಿನದಂದು ಕರೆತರುವ ಕೆಲಸವಾಗಬೇಕು. ಗ್ರಾಮೀಣ ಮಟ್ಟದಲ್ಲಿ ಇತಂಹ ಕಾರ್ಯವನ್ನು ಮಹಿಳಾ ಸಂಘಗಳು ಮಾಡಿದರೆ ತಾಲೂಕಿನ ಮತದಾನ ಪ್ರಮಾಣ ಗಣನೀಯ ಹೆಚ್ಚಳಕ್ಕೆ ಸಹಾಯಕವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ‌ ಜಗದೇವ ಬಿ ಮಾತನಾಡಿ, “ಮತದಾನ ದಿನ ರಜೆ ಸಿಕ್ಕಿತೆಂದು ಅನ್ಯ ಸ್ಥಳಕ್ಕೆ ಪ್ರವಾಸಕ್ಕೆ ಹೋಗಬೇಡಿ. ಸಂವಿಧಾನ ಭವಿಷ್ಯದ ದೇಶದ ಭದ್ರತೆಗಾಗಿ ಮತದಾನ ಎಂಬ ಹಕ್ಕನ್ನು ನಮಗೆ ನೀಡಿದೆ. ನಮ್ಮ ಹಕ್ಕನ್ನು ಮತದಾನ ದಿನ ನಾವು ಮರೆತರೆ ನಮ್ಮ ಹಕ್ಕಿಗೆ ನಾವು ಮಾಡಿದ ಅವಮಾನ ಎಂಬಂತೆ. ಹೀಗಾಗಿ ತಪ್ಪದೇ ಮತದಾನ ಮಾಡಿ ನಮ್ಮ ಗೌರವವನ್ನು ಕಾಪಾಡಿಕೊಳ್ಳುವುದರ ಜತೆಗೆ ದೇಶದ ಗೌರವವನ್ನು ಎತ್ತಿ ಹಿಡಿಯೋಣ” ಎಂದರು.

ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಡಾ ಎಚ್ ಬಿ ಹುಲಗಣ್ಣವರ ಮಾತನಾಡಿ, “ಎಲ್ಲ ದಾನಕ್ಕಿಂತ ಮತದಾನ ಶ್ರೇಷ್ಟ ದಾನವಾಗಿದೆ. ಮತದಾನ ದಿನ ಬದ್ಧತೆಯಿಂದ, ಕಾಳಜಿಯಿಂದ ಮತದಾನ ಕಾರ್ಯ ಸುಲಲಿತವಾಗಿ ನಡೆಯುವಂತಾಗಬೇಕು. ಇದಕ್ಕೆ ನಮ್ಮೆಲ್ಲ ಸಿಬ್ಬಂದಿ ವರ್ಗದ ಸಹಕಾರ ಅವಶ್ಯಕ” ಎಂದು ತಿಳಿಸಿದರು.

ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್ ನರಗುಂದದ ಕಾರ್ಯನಿರ್ವಾಹಕ ಅಧಿಕಾರಿ‌ ಸೋಮಶೇಖರ ಬಿರಾದರ ಮಾತನಾಡಿ, “ಕಡ್ಡಾಯ ಮತದಾನಕ್ಕೆ ತಾಲೂಕು ಸ್ವೀಪ್ ಸಮಿತಿಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸಾರ್ವಜನಿಕರು ಮತದಾನದಿಂದ ತಪ್ಪಿಸಿಕೊಳ್ಳದೇ ತಮ್ಮ ಹಕ್ಕನ್ನು ಮತದಾನ ದಿನ ಚಲಾಯಿಸಿ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆಮಾಡಿ” ಎಂದು ತಿಳಿಸಿದರು.

ಕಡ್ಡಾಯ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಎನ್.ಆರ್.ಎಲ್.ಎಂ ಮಹಿಳಾ ಸಂಘಟನೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಪುರಸಭೆ ಕಾರ್ಯಾಲಯದ ಸಿಬ್ಬಂದಿ ಹಾಗೂ ತಾಲೂಕು ಪಂಚಾಯತ ಸಿಬ್ಬಂದಿ ವರ್ಗ ಮತ್ತು ತಾಲೂಕಿನ ೧೩ ಗ್ರಾಮ ಪಂಚಾಯತಗಳ ಸಿಬ್ಬಂದಿ ವರ್ಗಕ್ಕೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಆನಂದ ಭೋವಿ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ನಗರದ ಪುರಸಭೆ ಮುಖ್ಯ ಕಚೇರಿಯಿಂದ ಮತದಾನ ಜಾಗೃತಿ ಜಾಥಾ ಆರಂಭವಾಗಿ ನಗರದ ಟಿಎಂಸಿ ರೋಡ್‌, ಮಾರ್ಕೆಟ್ ಮುಖ್ಯ ರಸ್ತೆ, ಬಸವೇಶ್ವರ ಸರ್ಕಲ್, ಮೂಲಕ ಸಂಚರಿಸಿ ನಗರದ ಶಿವಾಜಿ ಸರ್ಕಲ್‌ನಲ್ಲಿ ಮತದಾನ ಕುರಿತಾದ ವಿಶೇಷ ಘೋಷಣೆಗಳನ್ನು ಕೂಗುತ್ತಾ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬಿಜೆಪಿ ನಾಯಕರದ್ದು ಭೂ ಮಾಲಿಕ ಪಕ್ಷ: ಕಿಮ್ಮನೆ ರತ್ನಾಕರ್

ಕಡ್ಡಾಯ ಮತದಾನ ಜಾಗೃತಿ ಜಾಥಾದಲ್ಲಿ ತಹಶೀಲ್ದಾರ್ ಶ್ರೀಶೈಲ ತಳವಾರ, ಪುರಸಭೆ ಮುಖ್ಯ ಅಧಿಕಾರಿ ಅಮಿತ್ ತಾರದಾಳೆ, ಸಿಡಿಪಿಓ ಪ್ರದೀಪ ನಾಡಿಗೇರ, ಟಿಎಚ್‌ಒ ರೇಣುಕಾ, ಕೆ ಎಸ್ ಹಾದಿಮನಿ, ಸಹಾಯಕ ನಿರ್ದೇಶಕ, ಪಂಚಾಯತ್ ರಾಜ್ ಸಂತೋಷಕುಮಾರ್ ಪಾಟೀಲ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...