ಗದಗ | ಯೋಗವು ನಮ್ಮ ಜೀವನ ಶೈಲಿಯಾಗಬೇಕು: ನಾಗೇಶ ಹುಬ್ಬಳ್ಳಿ

Date:

“ಭಾರತ ಪರಂಪರೆಯ ಸಮೃದ್ಧ ಆರೋಗ್ಯದ ಸಾಧನೆಯಿಂದ ಯೋಗವು ನಮ್ಮ ಜೀವನ ಶೈಲಿಯಾಗಬೇಕು. ಪ್ರಕೃತಿದತ್ತ ಆಹಾರ ವಿಹಾರದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು”  ಎಂದು ಮುಂಡರಗಿ ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು. 

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ  ರಾಮೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅನ್ಮೋಲ್ ಯೋಗ ಸಂಸ್ಥೆ ಸಹಯೋಗದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

“ಸರ್ಕಾರಿ ಶಾಲೆಯಲ್ಲಿ ಯೋಗದ ಬಗ್ಗೆ ಇಷ್ಟೊಂದು ಆಸಕ್ತಿಯಿಂದ ಮಕ್ಕಳನ್ನು ಯೋಗಾಭ್ಯಾಸದಲ್ಲಿ ತೊಡಗಿಸಿರುವುದು ಶ್ಲಾಘನೀಯ. ಮಕ್ಕಳಿಗೆ ಯೋಗ ಮಾಡಿ ರೋಗದಿಂದ ದೂರವಾಗಲು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಮುಖ್ಯ ಅತಿಥಿ ಅನ್ಮೋಲ್ ಯೋಗ ಕೇಂದ್ರ ಹಾಗೂ ಮುಂಡರಗಿ ತಾಲೂಕಾ ಆಯುಷ್ ವೈದ್ಯರ ಸಂಘದ ಅಧ್ಯಕ್ಷ ಡಾ. ಚಂದ್ರಕಾಂತ ಇಟಗಿ ಮಾತನಾಡಿ, “ಯೋಗ ಮತ್ತು ಆಯುರ್ವೇದ ಚಿಕಿತ್ಸೆಗಳು ಉತ್ತಮ ಜೀವನಕ್ಕೆ ಕೈದೀವಿಗೆಗಳಿದ್ದಂತೆ. ಮಕ್ಕಳು ಬಾಲ್ಯದಿಂದಲೇ ಉತ್ತಮ ಆರೋಗ್ಯಶೈಲಿ ರೂಢಿಸಿಕೊಳ್ಳಬೇಕು” ಎಂದರು.

ಮಕ್ಕಳಿಗಾಗಿ ಯೋಗಾಸನ ಸ್ಪರ್ಧೆ: ಅನ್ಮೋಲ್ ಯೋಗ ಕೆಂದ್ರದಿಂದ ನಡೆಸಿದ್ದ ಯೋಗ ಸ್ಪರ್ದೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಮೇಘಾ ಉಮೇಶ ದಂಡಿನ ಪ್ರಥಮ, ಸಾಕ್ಷಿ ಮಂಜುನಾಥ ಬಾಲಾಪುರ ದ್ವಿತಿಯ, ಕೊಟ್ರೇಶ ಜಿತೇಂದ್ರ ಬಾಗಳಿ ತೃತಿಯ ಸ್ಥಾನ ಪಡೆದರು. ರಶ್ಮಿ ಯಲ್ಲಪ್ಪ ಕುರಿ, ಹುಲಿಗೆಮ್ಮ ರಾಮಪ್ಪ ತ್ಯಾಪಿ, ನಹಾರಿಕಾ ಜಿತೇಂದ್ರ ಬಾಗಳಿ ಸಮಾಧಾನಕರ ಬಹುಮಾನ ಪಡೆದರು.

ಡಾ. ಮಂಗಳಾ ಚಂದ್ರಕಾಂತ ಇಟಗಿಯವರ ನಿರ್ದೇಶನದಲ್ಲಿ ನಿರ್ಮಾಣಗೊಂಡ ರಾಮೇನಹಳ್ಳಿ ಶಾಲಾ ಮಕ್ಕಳಿಂದ ಕಲಾತ್ಮಕ ಯೋಗ ಪ್ರದರ್ಶನಗೊಂಡಿತು. ಮುಖ್ಯ ಶಿಕ್ಷಕರಾದ ಡಾ. ನಿಂಗು ಸೊಲಗಿ ಪ್ರಾಸ್ತಾವಿಕವಾಗಿ ಮಾತನಾಡಿ ಯೋಗಾಭ್ಯಾಸ ನಡೆಸಿಕೊಟ್ಟರು.  ಎಸ್.ಡಿ.ಎಂ.ಸಿ ಅಧ್ಯಕ್ಷ ಮಹೇಶ ಬಾಗಳಿ ಅಧ್ಯಕ್ಷತೆವಹಿಸಿದ್ದರು. ಶಿಕ್ಷಕರಾದ ಪಿ.ಎಂ.ಲಾಂಡೆ ಸ್ವಾಗತಿಸಿದರು, ಬಿ.ಎಚ್. ಹಲವಾಗಲಿ ವಂದಿಸಿದರು.

ಕಾರ್ಯಕ್ರಮದಲ್ಲಿ ವೈದ್ಯರಾದ ಅರವಿಂದಹಂಚಿನಾಳ, ದಾನಿಗಳಾದ ನಿವೃತ್ತ ಸೈನಿಕ ಪರಶುರಾಮ ಜಂಬಗಿ, ಹಿರಿಯರಾದ ಯಲ್ಲಪ್ಪ ಜಂಬಗಿ, ಎಂ.ಆರ್. ಗುಗ್ಗರಿ, ಶ್ರೀಮತಿ ಪಿ.ಎ. ಗಾಡದ, ಶಿವಲೀಲಾ ಅಬ್ಬಿಗೇರಿ, ಅಶೋಕ ಕೋಳಿ, ಸಂತೋಷ ಚೌಡಕಿ, ಉಮೇಶ ದಂಡೀನ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...